Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:36 - ಕನ್ನಡ ಸತ್ಯವೇದವು J.V. (BSI)

36 ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ದೆವಾಚ್ಯಾ ಮರ್ಜಿ ಸಾರ್ಕೆ ಅನಿಬಿ ಸಂಬಾಳ್ಕಿಚಿ ಗರಜ್ ಹಾಯ್ ತನ್ನಾ ತುಮ್ಕಾ ಗೊಸ್ಟಿಚೊ ಪ್ರತಿಫಳ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:36
39 ತಿಳಿವುಗಳ ಹೋಲಿಕೆ  

ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು


ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಎಲ್ಲವನ್ನೂ ಅಡಗಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ಸಹಿಸಿಕೊಳ್ಳುತ್ತದೆ.


ನಿಮ್ಮ ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡಕೊಳ್ಳುವಿರಿ.


ಆ ವಾಗ್ದಾನದ ಫಲಕ್ಕೋಸ್ಕರ ಅಬ್ರಹಾಮನು ಬಹು ದಿವಸ ಕಾದುಕೊಂಡಿದ್ದು ಆ ಫಲವನ್ನು ದೇವರು ಹೇಳಿದ ಹಾಗೆಯೇ ಹೊಂದಿದನು.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.


ಲೋಕವೂ ಅದರ ಆಶೆಯೂ ಗತಿಸಿ ಹೋಗುತ್ತವೆ; ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.


ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಆತನ ಮಹಿಮಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷ್ಠರಾಗಿ ಆನಂದಪೂರ್ವಕವಾದ ತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಯಾವಾಗಲೂ ತೋರಿಸುವವರಾಗಿರಬೇಕೆಂತಲೂ


ಆದರೆ ಕಾಣದಿರುವದನ್ನು ನಾವು ಎದುರುನೋಡುವವರಾಗಿದ್ದರೆ ತಾಳ್ಮೆಯಿಂದ ಕಾದುಕೊಂಡಿರುವೆವು.


ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು.


ಕರ್ತನಿಂದ ಪರಲೋಕ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವೆವೆಂದು ತಿಳಿದಿದ್ದೀರಲ್ಲಾ. ನೀವು ಕರ್ತನಾದ ಕ್ರಿಸ್ತನಿಗೇ ದಾಸರಾಗಿದ್ದೀರಿ.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ಆಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ಮಾಡಿ - ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನಗೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟವನ್ನೆಲ್ಲಾ ನೆರವೇರಿಸುವನು ಎಂಬದಾಗಿ ಅವನ ವಿಷಯದಲ್ಲಿ ಸಾಕ್ಷಿಹೇಳಿದನು.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು.


ನಾನು ಯೆಹೋವನಿಗೋಸ್ಕರ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.


ದಾವೀದನಾದರೋ ತನ್ನ ಸಕಾಲದವರಿಗೆ ಸೇವೆಮಾಡಿದನಂತರ ದೈವಸಂಕಲ್ಪದಿಂದ ನಿದ್ದೆಹೋಗಿ ತನ್ನ ಪಿತೃಗಳ ಬಳಿಯಲ್ಲಿ ಇಡಲ್ಪಟ್ಟು ಕೊಳೆಯುವ ಅವಸ್ಥೆಯನ್ನು ಅನುಭವಿಸಿದನು.


ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಹೆಸರನ್ನು ಸಂಪಾದಿಸಿಕೊಂಡಿದ್ದರೂ ವಾಗ್ದಾನದ ಫಲವನ್ನು ಹೊಂದಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು