Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:38 - ಕನ್ನಡ ಸತ್ಯವೇದವು J.V. (BSI)

38 ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನೀತಿವಂತನು ನಂಬಿಕೆಯಿಂದಲೇ ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಮಾಜಿ ನಿತಿವಂತ್ ಲೊಕಾ ವಿಶ್ವಾಸಾತುಚ್ ಜಿವನ್ ಕರ್ತಾತ್ ತೆನಿ ಫಾಟಿ ಸರಕ್ಲ್ಯಾ ಮಿಯಾ ಖುಶಿನ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:38
24 ತಿಳಿವುಗಳ ಹೋಲಿಕೆ  

ಇದಲ್ಲದೆ ಕರ್ಮಮಾರ್ಗದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ ನೀತಿವಂತನು ನಂಬಿಕೆಯಿಂದಲೇ ಬದುಕುವನೆಂದು ಬರೆದದೆ.


ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಯೆಹೋವದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರಿಗಿ ಮೂರ್ಖತನದಲ್ಲಿ ಬೀಳದಿರಲಿ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಯೆಹೋವನು ಆನಂದಿಸುವದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿ ಬೀಳುತ್ತಾನೆ; ಇವನೇ ಬೀಜ ಬಿದ್ದ ಬಂಡೆಯ ನೆಲವಾಗಿರುವವನು.


ಇಗೋ, ನನ್ನ ಸೇವಕನು; ಈತನನ್ನು ನಾನು ಆರಿಸಿಕೊಂಡೆನು; ಈತನು ನನಗೆ ಇಷ್ಟನು; ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು; ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.


ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ಆ ಯೆಹೂದ್ಯರು ಕರ್ತನಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದರು, ನಮ್ಮನ್ನೂ ಅಟ್ಟಿಬಿಟ್ಟರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ;


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ನಾನು ಶಿಷ್ಟನಿಗೆ - ನೀನು ಬಾಳೇ ಬಾಳುವಿ ಎಂದು ಹೇಳಲು ಅವನು ತನ್ನ ಪುಣ್ಯದ ಮೇಲೆ ಭರವಸವಿಟ್ಟು ಪಾಪ ಮಾಡಿದರೆ ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.


ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ನೀತಿವಂತನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಕೊಂದುಹಾಕಿದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.


ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು