Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:39 - ಕನ್ನಡ ಸತ್ಯವೇದವು J.V. (BSI)

39 ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಖರೆ ಅಮಿ ಫಾಟಿ ಸರ್ಕುನ್ ನಾಸ್ ಹೊತಲೆ ನ್ಹಯ್, ಹೆಚ್ಯಾ ಬದ್ಲಾಕ್ ವಿಶ್ವಾಸಾನ್ ರ್‍ಹಾವ್ನ್ ಸುಟ್ಕಾ ಖಮ್ವುನ್ ಘೆತಲ್ಯಾಂಚ್ಯಾ ಮದ್ಲೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:39
28 ತಿಳಿವುಗಳ ಹೋಲಿಕೆ  

ಯೇಸುವು ದೇವರ ಮಗನೆಂದು ನಂಬಿದವರೇ ಅಲ್ಲದೆ ಲೋಕವನ್ನು ಜಯಿಸುವವರು ಇನ್ನಾರಿದ್ದಾರೆ?


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ಆದರೆ ಈಗಿರುವ ಭೂಮ್ಯಾಕಾಶಗಳು ಅದೇ ವಾಕ್ಯದ ಬಲದಿಂದ ಬೆಂಕಿಯ ಮೂಲಕ ನಾಶವಾಗುವದಕ್ಕೆ ಇಡಲ್ಪಟ್ಟಿವೆ; ಮತ್ತು ಭಕ್ತಿಹೀನರ ಶಿಕ್ಷಾವಿಧಿಯೂ ನಾಶವೂ ಉಂಟಾಗುವ ದಿನಕ್ಕಾಗಿ ಆ ಬೆಂಕಿ ಸಿದ್ಧವಾಗಿದೆ.


ನಂಬಿಕೆಯೋ ನಾವು ನಿರೀಕ್ಷಿಸುವವುಗಳ ವಿಷಯವಾಗಿ ಭರವಸದಿಂದಿರುವದೂ ಕಣ್ಣಿಗೆ ಕಾಣದವುಗಳನ್ನು ನಿಜವೆಂದು ತಿಳುಕೊಳ್ಳುವದೂ ಆಗಿದೆ.


ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು.


ನಾನು ಇವರ ಸಂಗಡ ಇದ್ದಾಗ ನೀನು ನನಗೆ ಕೊಟ್ಟಿರುವ ನಿನ್ನ ಹೆಸರಿನಲ್ಲಿ ಇವರನ್ನು ಕಾಯುತ್ತಾ ಬಂದೆನು, ಇವರನ್ನು ಕಾಪಾಡಿದೆನು; ಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕೆ ಗುರಿಯಾದ ಆ ಮನುಷ್ಯನೇ ಹೊರತು ಇವರಲ್ಲಿ ಮತ್ತಾರೂ ನಾಶವಾಗಲಿಲ್ಲ.


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರಕೊಂಡು ಬರುವದು; ಅವು ಒಳಹೊಕ್ಕು ಅಲ್ಲಿ ವಾಸಮಾಡುವವು; ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು ಅಂದನು.


ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಕಾಲು ನಿನ್ನ ದಾರಿಯಿಂದ ಅಗಲಲಿಲ್ಲ.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸು; ಅವನು ಆ ಏಳು ಮಂದಿ ಅರಸುಗಳಿಗೆ ಸೇರಿದವನು; ನಾಶಕ್ಕೆ ಹೋಗುವನು.


ಯಾಕಂದರೆ ಸತ್ಯದ ಪರಿಜ್ಞಾನವನ್ನು ನಾವು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಇರುವದಿಲ್ಲ;


ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ನೀನು ಕಂಡ ಈ ಮೃಗವು ಮೊದಲು ಇತ್ತು, ಈಗ ಇಲ್ಲ, ಮತ್ತು ಅಧೋಲೋಕದಿಂದ ಏರಿಬಂದು ನಾಶಕ್ಕೆ ಹೋಗುವದು. ಭೂನಿವಾಸಿಗಳೊಳಗೆ ಯಾರಾರ ಹೆಸರುಗಳು ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿರುವದಿಲ್ಲವೋ ಅವರು ಈ ಮೃಗವನ್ನು ನೋಡಿ ಇದು ಮೊದಲು ಇತ್ತು, ಈಗ ಇಲ್ಲ, ಇನ್ನು ಮೇಲೆ ಬರುವದು ಎಂದು ತಿಳಿದು ಆಶ್ಚರ್ಯಪಡುವರು.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು