Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:5 - ಕನ್ನಡ ಸತ್ಯವೇದವು J.V. (BSI)

5 ಆದದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ - [ದೇವರೇ], ಯಜ್ಞನೈವೇದ್ಯಗಳು ನಿನಗೆ ಇಷ್ಟವಾಗಿರಲಿಲ್ಲ, ನನಗೆ ದೇಹವನ್ನು ಸಿದ್ಧಮಾಡಿಕೊಟ್ಟಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕ್ರಿಸ್ತನು ಈ ಲೋಕದಲ್ಲಿ ಪ್ರತ್ಯಕ್ಷನಾದಾಗ ಹೇಳಿದ್ದೇನೆಂದರೆ: “ದೇವರೇ, ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ಆದರೆ ನೀನು ನನಗಾಗಿ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಕ್ರಿಸ್ತ ಯೇಸು ಭೂಲೋಕದೊಳಗೆ ಬಂದಾಗ, “ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿ ಕೊಟ್ಟಿರುವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆ ಹೊವ್ನ್, ಕ್ರಿಸ್ತ್ ಹ್ಯಾ ಜಗಾತ್ ಯೆತಾನಾ ಸಾಂಗಲ್ಲೆ ಕಾಯ್ ಮಟ್ಲ್ಯಾರ್, ದೆವಾ ತುಕಾ ಯಜ್ನ್ ಕರ್‍ತಲೆ ಅನಿ ಕಾನಿಕಾಚಿ ಆಶಾ ನಾ ಖರೆ ತಿಯಾ ಮಾಜ್ಯಾ ಸಾಟ್ನಿ ಆಂಗ್ ತಯಾರ್ ಕರುನ್ ಥವ್ಲೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:5
26 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ - ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿಕುರಿಹೋತಗಳ ರಕ್ತಕ್ಕೆ ನಾನು ಒಲಿಯೆನು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಇದಲ್ಲದೆ ಆತನು ತನ್ನ ಚೊಚ್ಚಲ ಮಗನನ್ನು ಭೂಲೋಕದೊಳಗೆ ತಿರಿಗಿ ಬರಮಾಡುವಾಗ ದೇವರ ದೂತರೆಲ್ಲರೂ ಆತನಿಗೆ ಅಡ್ಡ ಬೀಳಲಿ ಎಂದು ಹೇಳುತ್ತಾನೆ.


ಆಗ ನಾನು - ಇಗೋ, ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ. ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ ಎಂದು ಹೇಳಿದೆನು ಅನ್ನುತ್ತಾನೆ.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ,


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧರಾದೆವು.


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ಮನುಷ್ಯನಾಗಿ ಬಂದಿರುವ ಯೇಸು ಕ್ರಿಸ್ತನನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಯೇಸುವನ್ನು ಒಪ್ಪದವನು ಮೋಸಗಾರನೂ ಕ್ರಿಸ್ತವಿರೋಧಿಯೂ ಆಗಿದ್ದಾನೆ.


ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರುತ್ತಾನಷ್ಟೆ ; ಆದದರಿಂದ ಸಮರ್ಪಿಸುವದಕ್ಕೆ ಈ ಮಹಾಯಾಜಕನಿಗೂ ಏನಾದರೂ ಇರಬೇಕು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳಿಸಿದನು.


ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಹೆಂಗಸು ಗಂಡಸನ್ನು ಕಾಪಾಡುವಳು.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಅವನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಸ್ವಾವಿುಗೆ ಹೇಳಿಕಳುಹಿಸಿದನು.


[ಆತನಿಗರ್ಪಿಸತಕ್ಕ] ಹೋಮಕ್ಕೆ ಲೆಬನೋನಿನ ಪಶುಗಳು ಸಾಲವು, ಅಲ್ಲಿನ ವನವು ಸವಿುತ್ತಿಗೆ ಸಾಲದು.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ಧರ್ಮಶಾಸ್ತ್ರದ ಪ್ರಕಾರ ಸಮರ್ಪಣೆಯಾಗುತ್ತಾ ಬರುವ ಯಜ್ಞನೈವೇದ್ಯಗಳೂ ಸರ್ವಾಂಗಹೋಮಗಳೂ ದೋಷಪರಿಹಾರಕಯಜ್ಞಗಳೂ ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವದಿಲ್ಲ ಎಂದು ಮೇಲೆ ಹೇಳಿದ ತರುವಾಯ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು