ಇಬ್ರಿಯರಿಗೆ 11:1 - ಕನ್ನಡ ಸತ್ಯವೇದವು J.V. (BSI)1 ನಂಬಿಕೆಯೋ ನಾವು ನಿರೀಕ್ಷಿಸುವವುಗಳ ವಿಷಯವಾಗಿ ಭರವಸದಿಂದಿರುವದೂ ಕಣ್ಣಿಗೆ ಕಾಣದವುಗಳನ್ನು ನಿಜವೆಂದು ತಿಳುಕೊಳ್ಳುವದೂ ಆಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರಕುತ್ತವೆ ಎಂಬ ದೃಢ ನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ವಿಶ್ವಾಸ್, ಮನ್ತಲೊ ಅಮಿ ರಾಕುನ್ಗೆತ್ ಹೊತ್ತ್ಯಾ ವಿಶಯಾತ್ ಬರೊಸ್ಯಾನ್ ರಾತಲೆ ಅನಿ ಡೊಳ್ಯಾಕ್ ದಿಸಿನಸಲ್ಲೆ ಖರೆ ಮನುನ್ ಕಳ್ವುನ್ ಘೆತಲೆ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |
ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.