Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:10 - ಕನ್ನಡ ಸತ್ಯವೇದವು J.V. (BSI)

10 ಯಾಕಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರುನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಬ್ರಹಾಮನು ಶಾಶ್ವತವಾದ ಅಡಿಪಾಯಗಳುಳ್ಳ ನಗರಕ್ಕಾಗಿ ಕಾದಿದ್ದನು. ದೇವರೇ ಸಂಕಲ್ಪಿಸಿ, ನಿರ್ಮಿಸಿದ ನಗರಕ್ಕಾಗಿ ಅವನು ಕಾದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ದೇವರು ಯಾವುದನ್ನು ಕಟ್ಟುವವರೂ ಮಾಡುವವರೂ ಆಗಿದ್ದಾರೋ ಆ ಅಸ್ತಿವಾರಗಳುಳ್ಳ ಪಟ್ಟಣಕ್ಕೋಸ್ಕರ ಅವರು ಎದುರುನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಕಶ್ಯಾಕ್ ಮಟ್ಲ್ಯಾರ್, ಅಬ್ರಾಹಾಮ್ ಶಾಸ್ವತ್ ಪಾಯಾ ಘಾಟಲ್ಯಾ ಶಾರಾತ್ ಮಟ್ಲ್ಯಾರ್, ದೆವಾನ್ ಯೆವ್ಜುನ್ ಭಾಂದಲ್ಯಾ ಶಾರಾಚಿ ವಾಟ್ ರಾಕಿತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:10
11 ತಿಳಿವುಗಳ ಹೋಲಿಕೆ  

ಯಾಕಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ; ಇನ್ನು ಮುಂದೆ ಆಗುವ ಪಟ್ಟಣವನ್ನು ಹಾರೈಸುತ್ತಾ ಇದ್ದೇವೆ.


ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವದನ್ನು ಎದುರುನೋಡುತ್ತಾ ಇದ್ದೇವೆ.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಸಮಸ್ತವನ್ನು ಕಟ್ಟಿದಾತನು ದೇವರೇ.


ನನ್ನ ತಂದೆಯ ಮನೆಯಲ್ಲಿ ಬಹಳ ಬಿಡಾರಗಳು ಅವೆ; ಇಲ್ಲದಿದ್ದರೆ ನಿಮಗೆ ಹೇಳುತ್ತಿದ್ದೆನು; ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗುತ್ತೇನಲ್ಲಾ.


ಇದಲ್ಲದೆ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ಪರಲೋಕದಿಂದ ದೇವರ ಬಳಿಯಿಂದ ಇಳಿದುಬರುವದನ್ನು ಕಂಡೆನು; ಅದು ತನ್ನ ಗಂಡನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ;


ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು