Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:12 - ಕನ್ನಡ ಸತ್ಯವೇದವು J.V. (BSI)

12 ಆದದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ಮೃತಪ್ರಾಯನಾಗಿದ್ದ ಒಬ್ಬ ವ್ಯಕ್ತಿ ಆಕಾಶದ ನಕ್ಷತ್ರಗಳಂತೆಯೂ ಕಡಲ ತೀರದ ಮರಳಿನಂತೆಯೂ ಅಸಂಖ್ಯಾತವಾದ ಸಂತತಿಗೆ ತಂದೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಮರಳಿನಂತೆ ಅಸಂಖ್ಯವಾಗಿಯೂ ಸಂತತಿಯವರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆ ಹೊವ್ನ್, ಮರ್ತಲ್ಯಾ ವಯಾಚ್ಯಾ ಮಾನ್ಸಾಕ್ನಾ ಮಳ್ಬಾತ್ಲ್ಯಾ ಚುಕ್ಕಿಯಾಂಚ್ಯಾ ಸಾರ್ಕೆಬಿ ಅನಿ ಸಮುಂದರಾಚ್ಯಾ ದಂಡೆ ವೈಲ್ಯಾ ರೆತಿ ಸಾರ್ಕೆಬಿ ಮೆಜುಕ್ ಹೊಯ್ನಸಲ್ಲಿ ತವ್ಡಿ ಪೊರಾ ಉಪಾಜ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:12
22 ತಿಳಿವುಗಳ ಹೋಲಿಕೆ  

ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ನಿನಗೆ ಒಳ್ಳೇದನ್ನು ಮಾಡಿ ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲವೇ ಅಂದನು.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆ ನಡಿಸುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.


ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.


ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞಾನೇಮವಿಧಿಗಳನ್ನು ಕೈಕೊಂಡು ನಡೆದದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಿ


ಅವನು ಹೊರಗೆ ಬಂದು ಭೂವಿುಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.


ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದ ಒಂದು ಶೇಷ ಮಾತ್ರ ತಿರುಗಿಕೊಳ್ಳುವದು; ತುಂಬಿತುಳುಕುವ ನ್ಯಾಯಪ್ರವಾಹದ ಪ್ರಲಯ ನಿಶ್ಚಿತವಾಗಿದೆ.


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳ ಪ್ರಕಾರವೂ ಅಸಂಖ್ಯಾತರಾಗುತ್ತಿದ್ದರು; ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.


ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಷ್ಟು ಹೆಚ್ಚಿಸಿ - ನೀವು ಈ ದೇಶದೊಳಕ್ಕೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳುವಿರಿ ಎಂದು ಅವರ ಪಿತೃಗಳಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದಿ.


ಇಸ್ರಾಯೇಲ್ಯರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರುಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ.


ಇಸ್ರಾಯೇಲ್ ಯೆಹೂದ್ಯರು ಸಮುದ್ರತೀರದ ಉಸುಬಿನಷ್ಟು ಅಸಂಖ್ಯರಾಗಿದ್ದರು; ಅವರು ಅನ್ನಪಾನಗಳಲ್ಲಿ ತೃಪ್ತರಾಗಿ ಸಂತೋಷದಿಂದಿದ್ದರು.


ಹೀಗಿರುವದರಿಂದ ನನ್ನ ಆಲೋಚನೆಯನ್ನು ಕೇಳು - ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗು.


ಸಮುವೇಲನು ತಿರಿಗಿ - ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ ಎನ್ನಲು ಅವರು - ಹೌದು, ಸಾಕ್ಷಿಯಾಗಿದ್ದಾರೆ ಎಂದು ನುಡಿದರು.


ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ವಿುಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರತೀರದ ಮರಳಿನಂತೆ ಅಸಂಖ್ಯರಾಗಿದ್ದರು.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆಹೋದದರಿಂದ ಸ್ವಲ್ಪಮಂದಿಯೇ ಉಳಿಯುವಿರಿ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟಾದಿರಲ್ಲಾ.


ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ - ಕರ್ತನು ಈ ದೇಶದವರ ವಿಷಯ ಪೂರ್ಣವಾಗಿಯೂ ತೀವ್ರವಾಗಿಯೂ ಲೆಕ್ಕವನ್ನು ತೀರಿಸುವನಾದದರಿಂದ ಇಸ್ರಾಯೇಲ್ಯರ ಸಂಖ್ಯೆಯು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಒಂದು ಅಂಶ ಮಾತ್ರ ರಕ್ಷಣೆಹೊಂದುವದೆಂದು ಕೂಗಿ ಹೇಳುತ್ತಾನೆ.


ಎಲ್ಲರೂ ಬಾಧಿಸಲು ಮುಖವನ್ನು ಮುಂದಕ್ಕೆ ಚಾಚಿಕೊಂಡು ನುಗ್ಗುವರು; ಜನರನ್ನು ಉಸುಬಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪುಕೂಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು