Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:17 - ಕನ್ನಡ ಸತ್ಯವೇದವು J.V. (BSI)

17-18 ಅಬ್ರಹಾಮನು ಪರಿಶೋಧಿತನಾಗಿ ನಂಬಿಕೆಯಿಂದಲೇ ಇಸಾಕನನ್ನು ಸಮರ್ಪಿಸಿದನು. ಇಸಾಕನು ಅವನ ಏಕಪುತ್ರನಾಗಿದ್ದರೂ ಮತ್ತು ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರೆಂದು ದೇವರು ಅವನಿಗೆ ಹೇಳಿದ್ದರೂ ಆ ವಾಗ್ದಾನಗಳನ್ನು ಹೊಂದಿದ ಅವನು ಆ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17-18 ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17-18 ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಬ್ರಹಾಮನು ಪರೀಕ್ಷೆಗೆ ಒಳಗಾದಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಬ್ರಾಹಾಮಾನ್ ವಿಶ್ವಾಸಾ ವೈನಾಚ್ ಇಸಾಕಾಕ್ ತೊ ಅಪ್ಲೊ ಎಕುಚ್ ಲೆಕ್ ಹೊಲ್ಯಾರ್ಬಿ ದೆವಾಕ್ ಒಪ್ಸುನ್ ದಿಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:17
20 ತಿಳಿವುಗಳ ಹೋಲಿಕೆ  

ಯೆಹೋವನು ನುಡಿದದ್ದನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕೆ ಹಿಂದೆಗೆಯದೆ ಹೋದದ್ದರಿಂದ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು;


ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.


ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ ಆಶ್ಚರ್ಯಪಡಬೇಡಿರಿ; ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು; ಹೃದಯಗಳನ್ನು ಶೋಧಿಸುವವನು ಯೆಹೋವನೇ.


ಆದರೆ ಅವರ ವಂಶಾವಳಿಗೆ ಸೇರದೆ ಇರುವ ಮೆಲ್ಕಿಜೆದೇಕನು ಅಬ್ರಹಾಮನಿಂದಲೇ ದಶಮಭಾಗಗಳನ್ನು ತಕ್ಕೊಂಡದ್ದಲ್ಲದೆ ದೇವರಿಂದ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು; ಅದರಿಂದ ಜನರು ಶೋಧಿಸಲ್ಪಟ್ಟು ಶುದ್ಧಹೊಂದಿ ಶುಭ್ರರಾಗುವರು; ಅಂತ್ಯವು ಕ್ಲುಪ್ತಕಾಲದಲ್ಲೇ ಆಗುವದು.


ಆದದರಿಂದ ಅವನ ದೇಶದಲ್ಲುಂಟಾದ ಅದ್ಭುತದ ವಿಷಯವನ್ನು ವಿಚಾರಿಸುವದಕ್ಕಾಗಿ ಬಾಬೆಲಿನ ಪ್ರಭುಗಳ ರಾಯಭಾರಿಗಳು ಅವನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವದಕ್ಕೂ ಅವನ ಸರ್ವಾಂತರ್ಯವನ್ನು ತಿಳುಕೊಳ್ಳುವದಕ್ಕೂ ಅವನನ್ನು ಕೈಬಿಟ್ಟನು.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಇವರೆಲ್ಲರು ವಾಗ್ದಾನದ ಫಲಗಳನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ಉಲ್ಲಾಸದೊಡನೆ ವಂದಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂವಿುಯ ಮೇಲೆ ಪರದೇಶದವರೂ ಪ್ರವಾಸಿಗಳೂ ಆಗಿದ್ದೇವೆಂದು ಒಪ್ಪಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು