Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:35 - ಕನ್ನಡ ಸತ್ಯವೇದವು J.V. (BSI)

35 ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಪುನರುತ್ಥಾನದಿಂದ ತಿರಿಗಿ ಹೊಂದಿದರು. ಕೆಲವರು ತಾವು ಯಾತನೆಯ ಯಂತ್ರಕ್ಕೆ ಕಟ್ಟಲ್ಪಟ್ಟಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿ ಮುರಿಸಿಕೊಂಡು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ಥಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ, ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಸ್ತ್ರೀಯರು ಸತ್ತು ಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಆದರೆ ಬೇರೆ ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಉತ್ತಮ ಪುನರುತ್ಥಾನ ಹೊಂದುವುದಕ್ಕಾಗಿ ತಮಗೆ ಬಿಡುಗಡೆಯನ್ನು ಸ್ವೀಕರಿಸದೆ ಹೋದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಬಾಯ್ಕೊ ಮಾನ್ಸಾನಿ ಮರುನ್ ಗೆಲ್ಲ್ಯಾ ಅದ್ಲ್ಯಾ ಲೊಕಾಕ್ನಿ ಪರ್ತುನ್ ಝಿತ್ತೆ ಹೊತಲ್ಯಾ ವೈನಾ ಪರ್ತುನ್ ಘೆಟ್ಲ್ಯಾನಿ, ಥೊಡ್ಯಾ ಲೊಕಾನಿ ಬರೆ ಪರ್ತುನ್ ಝಿತ್ತೆ ಹೊತಲೆ ಗಾವ್ತಾ ಮನುನ್ ಸುಟ್ಕಾ ನಕ್ಕೊ ಮನುನ್ ಮೊಡ್ವುನ್ ಘೆವ್ನ್ ಮರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:35
17 ತಿಳಿವುಗಳ ಹೋಲಿಕೆ  

ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನವು ನನಗೆ ಒದಗಿ ಬಂದೀತು.


ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ದೇವಜನರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.


ಇದಲ್ಲದೆ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುವದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ;


ಲಯವಾಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವದು. ಆ ಮಾತು ಏನಂದರೆ - ಮರಣವು ನುಂಗಿಯೇ ಹೋಯಿತು, ಜಯವಾಯಿತು ಎಂಬದೇ.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು.


ಅವನನ್ನು ಹೊಡೆದು ವಿಚಾರಿಸುವದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.


ಅದಕ್ಕೆ ಪೇತ್ರ ಯೋಹಾನರು ಅವರಿಗೆ - ದೇವರ ಮಾತನ್ನು ಕೇಳುವದಕ್ಕಿಂತಲೂ ನಿಮ್ಮ ಮಾತನ್ನು ಕೇಳುವದು ದೇವರ ಮುಂದೆ ನ್ಯಾಯವೋ ಏನು? ನೀವೇ ತೀರ್ಪುಮಾಡಿಕೊಳ್ಳಿರಿ;


ಎದ್ದು ಹೊರಗೆ ಬರುವ ಕಾಲ ಬರುತ್ತದೆ. ಒಳ್ಳೇದನ್ನು ಮಾಡಿದವರಿಗೆ ಜೀವಕ್ಕಾಗಿ ಪುನರುತ್ಥಾನವಾಗುವದು; ಕೆಟ್ಟದ್ದನ್ನು ನಡಿಸಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವದು.


ಅವರು ನಿನಗೆ ಮುಯ್ಯಿಗೆಮುಯ್ಯಿಮಾಡುವದಕ್ಕೆ ಏನೂ ಇಲ್ಲದವರಾಗಿದ್ದರೂ ನೀತಿವಂತರು ಜೀವಿತರಾಗಿ ಎದ್ದು ಬರುವಲ್ಲಿ ನಿನಗೆ ಮುಯ್ಯಿಗೆಮುಯ್ಯಾಗುವದರಿಂದ ನೀನು ಧನ್ಯನಾಗುವಿ ಅಂದನು.


ಸತ್ತವರು ಬದುಕಿ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.


ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.


ಅವರು ಇನ್ನು ಮರಣಕ್ಕೆ ಗುರಿಯಾಗುವದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿದ್ದಾರೆ. ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯು ಸೂಚಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು