Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:37 - ಕನ್ನಡ ಸತ್ಯವೇದವು J.V. (BSI)

37 ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಕೆಲವರನ್ನು ಗರಗಸದಿಂದ ಕೊಯ್ದು ಕೊಂದರು; ದೇವದ್ರೋಹಿಗಳಾಗಿ ಪ್ರಾಣವನ್ನು ಉಳಿಸಿಕೊಳ್ಳಿರೆಂದು ಕೆಲವರನ್ನು ಪ್ರೇರೇಪಿಸಿದರು; ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ತಿರುಗಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಥೊಡ್ಯಾಕ್ನಿ ಲೊಕಾನಿ ಗುಂಡೆ ಮಾರುನ್ ಜಿವ್ ಕಾಡ್ಲ್ಯಾನಿ, ಥೊಡಾಕ್ನಿ ಕಾಪುನ್ ದೊನ್ ತುಕ್ಡೆ ಕರ್ಲ್ಯಾನಿ, ತೆಂಕಾ ಕೊಯ್ತ್ಯಾನ್ ತೊಡುನ್ ಜಿವ್‍ ಕಾಡ್ಲ್ಯಾನಿ, ತ್ಯಾತುರ್ ಉಲ್ಲಿ ಲೊಕಾ ಬಕ್ರ್ಯಾಂಚೆ ಅನಿ ಶೆಳಿಯಾಂಚೆ ಚಮ್ಡೆ ನೆಸಿ ಸಾರ್ಕೆ ಹೊಲೆ, ಥೊಡಿ ಲೊಕಾ ಗರಿಬ್ ಹೊಲಿ, ಅನಿ ಥೊಡಿ ಲೊಕಾ, ತರಾಸಾತ್ ಹೊತ್ತಿ, ಅನಿ ಥೊಡೆ ಲೊಕಾಂಚ್ಯಾ ಖಟೊರ್ ಚಲ್ನುಕಿತ್ ಗಾವ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:37
40 ತಿಳಿವುಗಳ ಹೋಲಿಕೆ  

ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.


ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು ಎಂದು ಉತ್ತರಕೊಟ್ಟರು. ಅದಕ್ಕೆ ಅರಸನು - ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು ಅಂದನು.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.


ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಒಕ್ಕಲಿಗರು ಅವನ ಆಳುಗಳನ್ನು ಹಿಡುಕೊಂಡು ಒಬ್ಬನನ್ನು ಹೊಡೆದರು, ಒಬ್ಬನನ್ನು ಕಡಿದು ಹಾಕಿದರು, ಒಬ್ಬನನ್ನು ಕಲ್ಲೆಸೆದು ಕೊಂದರು.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಈ ಯೋಹಾನನಿಗೆ ಒಂಟೇ ಕೂದಲಿನ ಹೊದಿಕೆಯೂ ಸೊಂಟದಲ್ಲಿ ತೊಗಲಿನ ನಡುಕಟ್ಟೂ ಇದ್ದವು. ಅವನಿಗೆ ವಿುಡಿತೆ ಮತ್ತು ಕಾಡಜೇನು ಆಹಾರವಾಗಿದ್ದವು.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬದಾಗಿ ಇಬ್ಬರು ದುಷ್ಟ ಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿ ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ ಎಂದು ಬರೆದಿದ್ದಳು.


ಅದಕ್ಕೆ ಅವನು - ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ಎಲೀಯನು ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾವಿುಯಾದ ನಿನಗೆ ತಿಳಿಸಲ್ಪಡಲಿಲ್ಲವೋ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಊರಿನ ನಿವಾಸಿಗಳನ್ನು ಹಿಡಿದು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಮಾಡುವದಕ್ಕೂ ಹಚ್ಚಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇವಿುಗೆ ಬಂದನು.


ಕಡೆಗೆ ಮಂದಮಾರುತ ಶಬ್ದ! ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.


ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು; ಇಬ್ಬರೂ ಒಣನೆಲದ ಮೇಲೆ ದಾಟಿ ಹೋದರು.


ಅನಂತರ ಅವನು ಮೇಲಣಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದೀ ತೀರಕ್ಕೆ ಬಂದು


ಊರಿನ ನಿವಾಸಿಗಳನ್ನು ಹಿಡಿದು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸಮಾಡುವದಕ್ಕೆ ಹಚ್ಚಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇವಿುಗೆ ಬಂದನು.


ಆದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;


ಸ್ವಲ್ಪಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವರ ಜನರೊಂದಿಗೆ ಕಷ್ಟವನ್ನನುಭವಿಸುವದೇ ಒಳ್ಳೇದೆಂದು ತೀರ್ಮಾನಿಸಿಕೊಂಡನು.


ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು