Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:6 - ಕನ್ನಡ ಸತ್ಯವೇದವು J.V. (BSI)

6 ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ದೇವರ ಬಳಿಗೆ ಬರುವವನು ದೇವರು ಇದ್ದಾನೆ, ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬುವದು ಅವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೊಲ್ಯಾರ್ ವಿಶ್ವಾಸ್ ನಸ್ತಾನಾ ದೆವಾಕ್ ಮಾನ್ವುಕ್ ಹೊಯ್ನಾ, ದೆವಾಚ್ಯಾ ಜಗೊಳ್ ಯೆತಲೆ ದೆವ್ ಹಾಯ್ ಅನಿ ಅಪ್ನಾಕ್ ಹುಡಕ್ತಲ್ಯಾಕ್ನಿ ಪ್ರತಿ ಫಳ್ ದಿತಾ ಮನುನ್ ವಿಶ್ವಾಸ್, ಕರುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:6
47 ತಿಳಿವುಗಳ ಹೋಲಿಕೆ  

ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ; ಇದರ ಕೂಡ ಅವೂ ನಿಮಗೆ ದೊರಕುವವು.


ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ; ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಯಿ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆದರೆ ತಾವು ಯಾವನನ್ನು ನಂಬಲಿಲ್ಲವೋ ಆತನ ನಾಮವನ್ನು ಹೇಳಿಕೊಳ್ಳುವದು ಹೇಗೆ? ಮತ್ತು ಆತನ ಸುದ್ದಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಸಾರುವವರು ಕಳುಹಿಸಲ್ಪಡದೆ ಸಾರುವದೆಲ್ಲಿ?


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ


ಹೀಗಿರಲಾಗಿ ಆ ವಿಶ್ರಾಂತಿಯಲ್ಲಿ ಕೆಲವರು ಸೇರಬೇಕೆಂಬುವ ಮಾತು ಇನ್ನೂ ಇರುವದರಿಂದಲೂ ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದದ್ದರಿಂದಲೂ


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ಯೆಹೋವನು ಮೋಶೆಗೆ - ಈ ಜನರು ಇನ್ನು ಎಷ್ಟರ ಮಟ್ಟಿಗೆ ನನ್ನನ್ನು ಅಲಕ್ಷ್ಯಮಾಡುವರೋ; ನಾನು ನಡಿಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರೋ.


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.


ಧರ್ಮಶಾಸ್ತ್ರವು ಯಾವದನ್ನೂ ಸಿದ್ಧಿಗೆ ತಾರದೆ ಇರುವದರಿಂದ ಮೊದಲಿದ್ದ ನಿಯಮವು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ರದ್ದಾಗಿಹೋಯಿತು. ಅದಕ್ಕೆ ಬದಲಾಗಿ ಉತ್ತಮವಾಗಿರುವ ಒಂದು ನಿರೀಕ್ಷಾಧಾರವು ಪ್ರಾಬಲ್ಯಕ್ಕೆ ಬಂತು. ಈ ನಿರೀಕ್ಷಾಧಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸುವಂಥದು.


ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆಹೋದರು.


ಅವರಿಗೆ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆಹೋದ ಕಾರಣ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಆಗ ಯೆಹೋವನು ಮೋಶೆ ಆರೋನರಿಗೆ - ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲ್ಯರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆಹೋದದರಿಂದ ಈ ಸಮೂಹದವರನ್ನು ನಾನು ಅವರಿಗೆ ವಾಗ್ದಾನ ಮಾಡಿದ ದೇಶದೊಳಕ್ಕೆ ನೀವು ಕರಕೊಂಡು ಹೋಗಕೂಡದು ಎಂದು ಹೇಳಿದನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಐಗುಪ್ತದೇಶದ ಸರ್ವೈಶ್ವರ್ಯಕ್ಕಿಂತಲೂ ಕ್ರಿಸ್ತನ ನಿವಿುತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು; ಯಾಕಂದರೆ ಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು;


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಅರುವತ್ತೈದು ವರುಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ನಿಮಗೆ ನಂಬಿಕೆಯು ಸ್ಥಿರವಿಲ್ಲದಿದ್ದರೆ ನಿಮಗೆ ಸ್ಥಿರತೆಯೇ ಇಲ್ಲ ಎಂಬದೇ.


ನೀತಿವಂತನಿಗೆ ಫಲವುಂಟೆಂತಲೂ ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಮತ್ತು ಅವರು ಆ ರಮಣೀಯದೇಶವನ್ನು ತಿರಸ್ಕರಿಸಿ ಆತನ ಮಾತನ್ನು ನಂಬಲಿಲ್ಲ.


ಆದರೆ ಇವರೇ ದೇವರನ್ನು ಕುರಿತು - ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳುವಳಿಕೆಯೇ ನಮಗೆ ಬೇಡ ಎಂದೂ


ಆತನಿಗೆ ಇಸ್ರಾಯೇಲ್ಯರ ಮೇಲೆ ಕೋಪವುಂಟಾಯಿತು; ಯಾಕೋಬ್‍ವಂಶದವರಲ್ಲಿ ಬೆಂಕಿಹತ್ತಿತು.


ನೀನು ಮಾಡಿದ ಉಪಕಾರಕ್ಕೆ ಪ್ರತಿಯಾಗಿ ಯೆಹೋವನು ನಿನಗೆ ಉಪಕಾರಮಾಡಲಿ; ನೀನು ಯಾವಾತನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳ ಬಂದಿಯೋ ಆ ಇಸ್ರಾಯೇಲ್‍ದೇವರಾದ ಯೆಹೋವನು ನಿನಗೆ ಉತ್ತಮವಾದ ಪ್ರತಿಫಲವನ್ನು ಅನುಗ್ರಹಿಸಲಿ ಎಂದು ಉತ್ತರಕೊಟ್ಟನು.


ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.


ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು