Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:7 - ಕನ್ನಡ ಸತ್ಯವೇದವು J.V. (BSI)

7 ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ವಿಶ್ವಾಸಾನುಚ್ ನೊಯೆನ್ ತವ್ಡ್ಯಾ ಪತರ್ ದಿಸಿನಸ್ತಾನಾ ಹೊತ್ತ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ದೆವಾಕ್ನಾ ಸಾಂಗ್ನಿ ಘೆವ್ನ್ ಭಕ್ತಿನ್ ಅಪ್ಲ್ಯಾ ಘರ್‍ಚ್ಯಾ ಲೊಕಾಂಚ್ಯಾ ರಾಕನಿ ಸಾಟ್ನಿ ಢೊನ್ ಬಾಂದ್ಲ್ಯಾನ್, ಅನಿ ಲೊಕಾಕ್ನಿ ಸಗ್ಳ್ಯಾಕ್ನಿ ಶಿಕ್ಷಾತ್ ಪಡ್ತಲೆ ಹೊಲ್ಲೆ ಮನುನ್ ದಾಕ್ವುನ್ ವಿಶ್ವಾಸಾಚೆ ಫಳ್ ಘೆವ್ಕ್ ಗುರಿ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:7
41 ತಿಳಿವುಗಳ ಹೋಲಿಕೆ  

ಆಗ ದೇವರು ನೋಹನಿಗೆ - ಎಲ್ಲಾ ದೇಹಿಗಳಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅವರ ಅನ್ಯಾಯದಿಂದ ತುಂಬಿ ಅದೆ; ನಾನು ಅವರನ್ನೂ ಭೂವಿುಯ ಮೇಲಿರುವದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟಿಸುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಆತನಿಗೆ ಅವಿಧೇಯರಾಗಿದ್ದವರ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ಸೇರಿ ನೀರಿನ ಮೂಲಕ ರಕ್ಷಣೆಹೊಂದಿದರು.


ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ. ನಂಬಿಕೆಯೆಂಬ ನೀತಿಯಿಂದ ಆದದ್ದೇ.


ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿವಸಗಳಲ್ಲಿಯೂ ನಡೆಯುವದು.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ನಾವೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವದೆಂದು ಎದುರುನೋಡುತ್ತೇವೆ.


ನೊಹ ದಾನಿಯೇಲ ಯೋಬ ಎಂಬಿವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲೀ ಹೆಣ್ಣುಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಮನುಷ್ಯರು ಮೊದಲುಗೊಂಡು ಪಶುಪಕ್ಷಿಕ್ರಿವಿುಗಳವರೆಗೂ ಭೂವಿುಯ ಮೇಲಿದ್ದದ್ದೆಲ್ಲಾ ನಾಶವಾಯಿತು; ಅವು ಭೂವಿುಯ ಮೇಲಿನಿಂದ ಲಯವಾಗಿ ಹೋದವು. ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದರು.


ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಲಯದಲ್ಲಿ ನಾಶವಾಯಿತು.


ಆತನು ಭಕ್ತಿಹೀನರಾದ ಪುರಾತನರ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಲಯವನ್ನು ಬರಮಾಡಿದನು; ಆದರೆ ಸುನೀತಿಯನ್ನು ಸಾರುವವನಾಗಿದ್ದ ನೋಹನನ್ನೂ ಅವನೊಂದಿಗೆ ಬೇರೆ ಏಳು ಮಂದಿಯನ್ನೂ ಉಳಿಸಿದನು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ನಂಬಿಕೆಯೋ ನಾವು ನಿರೀಕ್ಷಿಸುವವುಗಳ ವಿಷಯವಾಗಿ ಭರವಸದಿಂದಿರುವದೂ ಕಣ್ಣಿಗೆ ಕಾಣದವುಗಳನ್ನು ನಿಜವೆಂದು ತಿಳುಕೊಳ್ಳುವದೂ ಆಗಿದೆ.


ಆದರೆ ನಂಬಿಕೆಯಿಂದುಂಟಾಗುವ ನೀತಿಯು ಏನು ಹೇಳುತ್ತದೆ? ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರುವದಕ್ಕೆ ಯಾರು ಮೇಲಣ ಲೋಕಕ್ಕೆ ಏರಿಹೋದಾರು? ಎಂದಾಗಲಿ


ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ಹೇಗಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಉಣ್ಣುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದು


ಇಗೋ ನಿಮಗೆ ಮುಂದಾಗಿ ಹೇಳಿದ್ದೇನೆ.


ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣು ಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ - ನೀವೆದ್ದು ಈ ಸ್ಥಳವನ್ನು ಬಿಟ್ಟು ಹೋಗಿರಿ, ಯೆಹೋವನು ಈ ಊರನ್ನು ನಾಶಮಾಡುತ್ತಾನೆ ಎಂದು ಹೇಳಿದನು. ಆದರೆ ಅವನು ಅವರಿಗೆ ಗೇಲಿಮಾಡುವವನಾಗಿ ಕಾಣಿಸಿದನು.


ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು.


ನೋಹನ ಚರಿತ್ರೆಯು - ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ತಪ್ಪಿಲ್ಲದವನೂ ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಹಾಗಾದರೆ ಏನು ಹೇಳೋಣ? ನೀತಿಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)


ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.


ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲವಷ್ಟೆ; ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.


ಆಮೇಲೆ ದೇವರು ಕನಸಿನಲ್ಲಿ ಅವರಿಗೆ - ನೀವು ಹೆರೋದನ ಬಳಿಗೆ ತಿರಿಗೆ ಹೋಗಬಾರದೆಂದು ಅಪ್ಪಣೆಕೊಟ್ಟದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.


ಅವರು ಪರಲೋಕದಲ್ಲಿರುವ ದೇವಾಲಯದ ಪ್ರತಿರೂಪವೂ ಛಾಯೆಯೂ ಆಗಿರುವ ಆಲಯದಲ್ಲಿ ಯಾಜಕತ್ವವನ್ನು ನಡಿಸುವವರು. ಮೋಶೆಯು ದೇವದರ್ಶನಗುಡಾರವನ್ನು ಮಾಡುವದಕ್ಕಿದ್ದಾಗ ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು ಎಂಬ ದೈವೋಕ್ತಿಯು ಅವನಿಗೆ ಉಂಟಾಯಿತಲ್ಲಾ.


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರಕೊಂಡು ಬಾಗಲನ್ನು ಮುಚ್ಚಿ ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.


ನಿನ್ನ ಕೆಟ್ಟತನದಿಂದ ನಿನ್ನಂಥವನಿಗೇ [ನಷ್ಟವಾದೀತು], ನಿನ್ನ ನೀತಿಯಿಂದ ನರಜನ್ಮದವನಿಗೇ [ಲಾಭ ಸಿಕ್ಕೀತು].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು