Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:13 - ಕನ್ನಡ ಸತ್ಯವೇದವು J.V. (BSI)

13 ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಹೀಗೆ ಮಾಡಿದರೆ ಕುಂಟಕಾಲು ಉಳುಕಿಹೋಗದೆ ವಾಸಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಯೋಗ್ಯವಾದ ಮಾರ್ಗದಲ್ಲಿ ಜೀವಿಸಿದರೆ ರಕ್ಷಣೆ ಹೊಂದುವಿರಿ ಮತ್ತು ನಿಮ್ಮನ್ನು ನಾಶಗೊಳಿಸಲು ನಿಮ್ಮ ಬಲಹೀನತೆಗಳಿಗೆ ಸಾಧ್ಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ.” ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮಿ ಚಲ್ತಲಿ ವಾಟ್ ನಿಟ್ ಕರಾ, ಅಶೆ ತುಮ್ಚಿ ಸೊಟ್ಟಿ ಪಾಯಾ ಮೊಡಿನಸ್ತಾನಾ ರ್‍ಹಾಂವ್ದಿತ್, ಹೆಚ್ಯಾ ಬದ್ಲ್ಯಾಕ್ ತಿ ಗುನ್ ಹೊತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:13
15 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.


ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ?


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು