ಇಬ್ರಿಯರಿಗೆ 12:16 - ಕನ್ನಡ ಸತ್ಯವೇದವು J.V. (BSI)16 ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತುಮ್ಚ್ಯಾತ್ ಕೊನ್ಬಿ ಅನೈತಿಕ್ ಸಮಂದ್ ಕರಿನಸ್ತಾನಾ ರ್‍ಹಾಂವ್ದಿತ್, ನಾ ಹೊಲ್ಯಾರ್ ಎಸಾವಾಚ್ಯಾ ಸಾರ್ಕೆ ಖೊಟ್ಯಾ ಚಾಲಿಚೊ ನಾಹೊಲ್ಯಾರ್ ದೆವಾಚೆ ಭಿಂಯೆನಸಲ್ಲೊ ಹೊವ್ನ್ ನಸ್ತಾನಾ ರ್‍ಹಾಂವ್ದಿತ್, ಎಸಾವಾನ್ ಎಕ್ ಜೆವ್ನಾಕ್ ಲಾಗುನ್ ಅಪ್ನಾಚೊ ಥೊರ್‍ಲ್ಯಾ ಲೆಕಾಚೊ ಹಕ್ಕ್ ಇಕುನ್ ಸೊಡ್ಲ್ಯಾನ್. ಅಧ್ಯಾಯವನ್ನು ನೋಡಿ |
ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.