Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:28 - ಕನ್ನಡ ಸತ್ಯವೇದವು J.V. (BSI)

28 ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತಸೆ ಹೊಲ್ಯಾರ್, ಹಾಲ್ವುಕ್ ಹೊಯ್ ನಸಲ್ಲ್ಯಾ ರಾಜ್ಯ್ ಅಮ್ಕಾ ಗಾವ್ಲ್ಯಾ ತೆಸೆ ಮನುನ್ ದೆವಾಕ್ ಧನ್ಯವಾದ್ ದಿತಲ್ಲೆ ಹೊವಾ! ದೆವಾಕ್ ಭಿಂಯಾನ್, ಅನಿ ಮಾನಾನ್ ತೆಕಾ ಮಾನ್ತಾ ತಸ್ಲಿ ಉಪ್ಕಾರ್ ಸ್ತುತಿ ಅಮಿ ಕರುಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:28
32 ತಿಳಿವುಗಳ ಹೋಲಿಕೆ  

ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.


ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಯೆಹೋವನೇ, ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.


ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು.


ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.


ನೀನು ಹೇಳುವದು ನಿಜ; ಅವರು ನಂಬದೆಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ.


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಕೀರ್ತಿ? ಆದರೆ ಒಳ್ಳೇದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.


ಹೀಗಿರುವಲ್ಲಿ ಸಹೋದರರೇ, ಯೇಸು ನಮಗೋಸ್ಕರ ಪ್ರತಿಷ್ಠಿಸಿದ ಜೀವವುಳ್ಳ ಹೊಸ ದಾರಿಯಲ್ಲಿ ಆತನ ರಕ್ತದ ಮೂಲಕ ಆತನ ಶರೀರವೆಂಬ ತೆರೆಯ ಮುಖಾಂತರ ದೇವರ ಸಮಕ್ಷಮದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು ಕೇಡಿಗನಿಗೆ ಜೊತೆಗಾರನು.


ಆತನು ಪರಿಶುದ್ಧರ ಸಭೆಯಲ್ಲಿ ಭಯಂಕರನಾದ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭೀಕರನು.


ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬದನ್ನು ಪರಿಶೋಧಿಸಿ ತಿಳುಕೊಳ್ಳಿರಿ.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು