Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:21 - ಕನ್ನಡ ಸತ್ಯವೇದವು J.V. (BSI)

21 ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತುಮಿ ತೆಚಿ ಇಚ್ಚ್ಯಾ ಫುರಾ ಕರಿಸಾರ್ಕೆ ಸಗ್ಳ್ಯಾ ಬರ್‍ಯಾ ಕಾಮಾಕ್ನಿ ಪಾಜೆ ಹೊಲ್ಲೊ ಅನ್ಕುಲ್ ತುಮ್ಕಾ ದಿಂವ್ದಿತ್ ಅನಿ ತೊ ಜೆಜುಕ್ರಿಸ್ತಾ ವೈನಾ ಅಪ್ನಾಕ್ ಸಮಾ ಹೊವ್ನ್ ಹೊತ್ತೆ ಅಮ್ಚ್ಯಾಕ್ಡೆ ಕರುಂದಿತ್. ತೆಕಾ ಸದಾಸರ್ವತಾಕ್ ಸ್ತುತಿ ಹೊಂವ್ದಿತ್ ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:21
53 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ಸಕಲ ಸತ್ಕಾರ್ಯದಲ್ಲಿಯೂ ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ದೇವರು ಸಕಲವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.


ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು.


ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.


ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.


ಲೋಕವೂ ಅದರ ಆಶೆಯೂ ಗತಿಸಿ ಹೋಗುತ್ತವೆ; ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಮತ್ತು ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ಎಣಿಕೆಯಲ್ಲಿ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವವರಾಗಿರುವದರಿಂದ ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.


ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು.


ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಕೃಪೆಯು ಶಾಶ್ವತವಾದದ್ದು; ನೀನು ಕೈಹಚ್ಚಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.


ಇದಲ್ಲದೆ ಆಕಾಶದಲ್ಲಿಯೂ ಭೂವಿುಯ ಮೇಲೆಯೂ ಭೂವಿುಯ ಕೆಳಗೆಯೂ ಸಮುದ್ರದ ಮೇಲೆಯೂ ಇರುವ ಎಲ್ಲಾ ಸೃಷ್ಟಿಗಳು ಅಂದರೆ ಭೂಮ್ಯಾಕಾಶಸಮುದ್ರಗಳೊಳಗೆ ಇರುವದೆಲ್ಲವೂ - ಸಿಂಹಾಸನಾಸೀನನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ ಮಾನ ಪ್ರಭಾವ ಆಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ಕೇಳಿದೆನು.


ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ತೋಚಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಮುಂದೆ ತುಂಬಾ ಕಣ್ಣುಗಳಿದ್ದವು.


ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ


ದೇವರ ಚಿತ್ತವೇನಂದರೆ ನೀವು ಶುದ್ಧರಾಗಿ ಇರಬೇಕೆಂಬದೇ. ಆದದರಿಂದ ಹಾದರಕ್ಕೆ ದೂರವಾಗಿರಬೇಕು.


ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಿರಿ;


ಯೇಸು ಕ್ರಿಸ್ತನನ್ನು ಒಡೆಯನೆಂದು ಪ್ರತಿಜ್ಞೆಮಾಡಿ ತಂದೆಯಾದ ದೇವರಿಗೆ ಘನವನ್ನು ಸಲ್ಲಿಸುವರು.


ದೇವರಿಗೆ ಯುಗಯುಗಾಂತರಗಳಲ್ಲಿಯೂ ಸ್ತೋತ್ರ. ಆಮೆನ್.


ಸಮಸ್ತವು ಆತನಿಂದ ಉತ್ಪತ್ತಿಯಾಗಿ ಆತನಿಂದ ನಡೆಯುತ್ತಾ ಆತನಿಗಾಗಿ ಇರುತ್ತದೆ; ಆತನಿಗೇ ಸದಾಕಾಲವೂ ಸ್ತೋತ್ರ. ಆಮೆನ್.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.


ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಅದರಿಂದ ದೇವರ ಮನುಷ್ಯನು ಪ್ರವೀಣನಾಗಿ ಸಕಲಸತ್ಕಾರ್ಯಕ್ಕೆ ಸನ್ನದ್ಧನಾಗುವನು.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು