Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:22 - ಕನ್ನಡ ಸತ್ಯವೇದವು J.V. (BSI)

22 ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸಹೋದರರೇ, ಈ ಬುದ್ಧಿಮಾತುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕೆಂದು ಕೇಳಿಕೊಳ್ಳುತ್ತೇನೆ. ಇವನ್ನು ಸಂಕ್ಷೇಪವಾಗಿಯೇ ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಸಹೋದರ ಸಹೋದರಿಯರೇ, ನಾನು ಹೇಳಿದ ಈ ಸಂಗತಿಗಳನ್ನು ನೀವು ತಾಳ್ಮೆಯಿಂದ ಆಲಿಸಬೇಕೆಂದು ನಿಮ್ಮಲ್ಲಿ ಬೇಡಿಕೊಳ್ಳುತ್ತೇನೆ. ನಿಮ್ಮನ್ನು ಬಲಪಡಿಸುವುದಕ್ಕಾಗಿ ಈ ಪತ್ರವನ್ನು ಬರೆದಿರುವೆನು. ಈ ಪತ್ರವು ಬಹುದೀರ್ಘವಾದದ್ದೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪ್ರಿಯರೇ, ಈ ಪ್ರಬೋಧನೆಗಳನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಭಾವಾನು ಅನಿ ಭೆನಿಯಾನು, ಹಿ ಹುಶ್ಯಾರ್ಕಿಚಿ ಗೊಸ್ಟಿಯಾ ತುಮಿ ಸೊಸುನ್ ಘೆವ್ಚೆ ಮನುನ್ ತುಮ್ಚ್ಯಾಕ್ಡೆ ಮಾಗ್ತಾ; ತುಮ್ಕಾ ಕಳಿ ಸಾರ್ಕೆ ಕರುನ್ ಲಿವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:22
22 ತಿಳಿವುಗಳ ಹೋಲಿಕೆ  

ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಇಗೋ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.


ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನತೋರಿಸುವವನೂ ಆಗಿದ್ದಾನೆ ಎಂದು ಹೇಳುವವರು ನಿಮ್ಮಲ್ಲಿದ್ದಾರಲ್ಲಾ. ಆ ಪೌಲನೆಂಬ ನಾನು ಕ್ರಿಸ್ತನ ಶಾಂತಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವದೇನಂದರೆ


ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.


ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ - ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ;


ನಮಗೋಸ್ಕರ ಪ್ರಾರ್ಥನೆಮಾಡಬೇಕೆಂದು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ, ಯಾಕಂದರೆ ನಿಮ್ಮ ಪ್ರಾರ್ಥನೆಗಳ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು