ಇಬ್ರಿಯರಿಗೆ 13:6 - ಕನ್ನಡ ಸತ್ಯವೇದವು J.V. (BSI)6 ಆದದರಿಂದ - ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು? ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ಸಭಾನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ, “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?” ಎಂದು ನಾವು ಧೈರ್ಯವಾಗಿ ಹೇಳುವೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಸೆ ಮನುನ್ ಖರ್ಯಾ ವಿಶ್ವಾಸಾನ್ ಅಮಿ ಮನುವಾ ಸರ್ವೆಸ್ವರುಚ್ ಮಾಜೊ ಮಜತ್‍ದಾರ್ ಕೊನಾಕ್ಬಿ ಮಿಯಾ ಭಿಂಯ್ ನಾ; ಮಾನ್ಸಾಚ್ಯಾನ್ ಮಾಕಾ ಕಾಯ್ ಕರುಕ್ ಹೊಯ್ಲ್? ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.