Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:10 - ಕನ್ನಡ ಸತ್ಯವೇದವು J.V. (BSI)

10 ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ ಆತನು ಬಹು ಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾಕರ್ತನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಸಗ್ಳ್ಯಾಚೊ ಆರಂಬ್ ಅನಿ ಅಂತ್ ಹೊವ್ನ್ ಅಸಲ್ಲ್ಯಾ ದೆವಾನ್ ಲೈ ಲೊಕಾಕ್ನಿ ಮಹಿಮೆನ್ ಭರುಸಾಟ್ನಿ ತೆಂಕಾ ಸುಟ್ಕಾ ಗಾವಿ ಸಾರ್ಕೆ ಕರ್‍ತಲ್ಯಾ ಜೆಜುಕ್ ತರಾಸಾಂಚ್ಯಾ ವೈನಾ ಅದ್ದಿ ಸಂಪುರ್ನ್ ಕರುಚೆ ಮನ್ತಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:10
46 ತಿಳಿವುಗಳ ಹೋಲಿಕೆ  

ಸಮಸ್ತವು ಆತನಿಂದ ಉತ್ಪತ್ತಿಯಾಗಿ ಆತನಿಂದ ನಡೆಯುತ್ತಾ ಆತನಿಗಾಗಿ ಇರುತ್ತದೆ; ಆತನಿಗೇ ಸದಾಕಾಲವೂ ಸ್ತೋತ್ರ. ಆಮೆನ್.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ನಮಗೋಸ್ಕರ ಮುಂದಾಗಿ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ


ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲಕಾರಣನು; ನಾವು ಆತನಿಗಾಗಿ ಉಂಟಾದೆವು. ಮತ್ತು ನಮಗೆ ಒಬ್ಬನೇ ಕರ್ತ; ಆತನು ಯೇಸು ಕ್ರಿಸ್ತನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು, ನಾವೂ ಆತನ ಮುಖಾಂತರ ಉಂಟಾದೆವು.


ಧರ್ಮಶಾಸ್ತ್ರವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇವಿುಸುತ್ತದೆ; ಆದರೆ ಧರ್ಮಶಾಸ್ತ್ರದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ನೇವಿುಸುತ್ತದೆ.


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ.


ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷರಾಗುವಿರಿ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನುಂಟುಮಾಡಿದ್ದಾನೆ.


ಇವುಗಳಾದ ಮೇಲೆ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ನಿಂತಿರುವದನ್ನು ಕಂಡೆನು. ಅವರು ಸಕಲ ಜನಾಂಗಕುಲ ಪ್ರಜೆಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಇದೆಲ್ಲಾ ದೇವರಿಂದಲೇ ಉಂಟಾದದ್ದು. ಆತನು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವದಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇವಿುಸಿ ಇದುವರೆಗೆ ಮರೆಮಾಡಿದ ಜ್ಞಾನವೇ.


ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ - ತೀರಿತು ಎಂದು ಹೇಳಿ ತಲೇಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.


ಯೇಸು ಆ ಜನಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೆ ಸಹ ಸಾಯುವದಕ್ಕಿದ್ದನು.


ಆತನು ಅವರಿಗೆ - ನೀವು ಹೋಗಿ - ಇಗೋ ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಗಳನ್ನು ವಾಸಿಮಾಡುತ್ತಾ ಇದ್ದು ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ ಎಂದು ಆ ನರಿಗೆ ಹೇಳಿರಿ.


ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ಒಡೆಯುವವನು ಅವರ ಮುಂದೆ ಹೊರಟಿದ್ದಾನೆ; ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ; ಅವರ ಅರಸನು ಅವರ ಮುಂದೆ ತೆರಳಿದ್ದಾನೆ, ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.


ಅದು ಜನಾಂಗಗಳೊಳಗೆ ವಿುಂಡರನ್ನು ಸಂಪಾದಿಸಿದರೂ ಅದನ್ನು ನಾನು ಈಗ ಸೆರೆಕೂಡುವೆನು; ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವದು.


ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇವಿುಸಿದೆನು.


ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು