Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:1 - ಕನ್ನಡ ಸತ್ಯವೇದವು J.V. (BSI)

1 ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆಚ್ಯಾಸಾಟ್ನಿ ಭಕ್ತಿನ್ ಚಲ್ತಲ್ಯಾ ಭಾವಾನು, ಅನಿ ಭೆನಿಯಾನು ದೆವಾಚ್ಯಾ ಬಲ್ವನಿತ್ ಭಾಗಿದಾರ್ ಹೊಲ್ಲ್ಯಾನು, ಅಮ್ಕಾ ಗಾವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಮಾನುನ್ ಘೆಟಲ್ಲ್ಯಾ ಅಮ್ಚ್ಯಾ ಶ್ರೆಸ್ಟ್ ಯಾಜಕ್ ಹೊವ್ನ್ ಅಸಲ್ಲ್ಯಾ ಜೆಜು ಕ್ರಿಸ್ತಾಕ್ಡೆ ಧ್ಯಾನ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:1
63 ತಿಳಿವುಗಳ ಹೋಲಿಕೆ  

ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ದೇವರ ಮನೆಯ ಮೇಲೆ ಅಧಿಕಾರಿಯಾಗಿರುವ ಶ್ರೇಷ್ಠನಾದ ಯಾಜಕನು ನಮಗಿದ್ದಾನೆ.


ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,


ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.


ನಾನು ಇತರರ ಸಂಗಡ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.


ನಾನು ಹೇಳುವದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಪಾಲಿಸುವನು.


ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ಯಾಕಂದರೆ ನಾನು ಹೇಳುವದೇನಂದರೆ - ಕ್ರಿಸ್ತನು ಪಿತೃಗಳಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಒಳಗಾದನು;


ಯಾಕಂದರೆ ಪವಿತ್ರ ಮಾಡುವಾತನಿಗೂ ಪವಿತ್ರರಾಗುವವರೆಲ್ಲರಿಗೂ ಒಬ್ಬನೇ ತಂದೆ ಇದ್ದಾನೆ. ಈ ಕಾರಣದಿಂದ ಪವಿತ್ರ ಮಾಡುವಾತನು ಪವಿತ್ರರಾಗುವವರನ್ನು ಸಹೋದರರೆನ್ನುವದಕ್ಕೆ ನಾಚಿಕೆಪಡದೆ -


ಯೇಸು ಅವರಿಗೆ - ನಿಮಗೆ ಸಮಾಧಾನವಾಗಲಿ ಎಂದು ತಿರಿಗಿ ಹೇಳಿ - ತಂದೆ ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ ಅಂದನು.


ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.


ಯೇಸು ಕ್ರಿಸ್ತನ ದಾಸನೂ ಯಾಕೋಬನ ತಮ್ಮನೂ ಆಗಿರುವ ಯೂದನು ತಂದೆಯಾದ ದೇವರಲ್ಲಿ ಪ್ರಿಯರಾದವರೂ ಯೇಸು ಕ್ರಿಸ್ತನಿಗಾಗಿ ಕಾಯಲ್ಪಟ್ಟವರೂ ಆಗಿರುವವರಿಗೆ ಬರೆಯುವದೇನಂದರೆ -


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಎತ್ತು ಯಜಮಾನನನ್ನು, ಕತ್ತೆ ಒಡೆಯನ [ಕೊಟ್ಟಿಗೆಯ] ಗೋದಲಿಯನ್ನು ತಿಳಿದಿರುವವು; ಇಸ್ರಾಯೇಲ್ ಜನರಿಗೋ ತಿಳುವಳಿಕೆಯಿಲ್ಲ, ನನ್ನ ಪ್ರಜೆಯು ಆಲೋಚಿಸುವದಿಲ್ಲ.


ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ ತಮ್ಮ ಸೇವೆಯ ಫಲವನ್ನು ಹೊಂದುವವರು ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.


ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.


ಆ ದಿನವನ್ನು ನಾವು ಎದುರುನೋಡುತ್ತಾ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ - ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ ಸತ್ಕ್ರಿಯೆಗಳಲ್ಲಿ ಸಂತೋಷಿಸುವ ನಿಮ್ಮ ಸಕಲ ಆಲೋಚನೆಯನ್ನೂ ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಸಿದ್ಧಿಗೆ ತರಬೇಕೆಂತಲೂ ಬೇಡಿಕೊಳ್ಳುತ್ತೇವೆ.


ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನ ಆಣೆ ಇಡುತ್ತೇನೆ.


ಹೀಗಿರಲಾಗಿ ನೀವು ದೇವರಿಂದ ಆರಿಸಿಕೊಂಡವರೂ ಪ್ರತಿಷ್ಠಿತರೂ ಪ್ರಿಯರೂ ಆಗಿರುವದರಿಂದ ಕನಿಕರ ದಯೆ ದೀನಭಾವ ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ಆತನು ನಿಮ್ಮನ್ನು ಸಹ ತನ್ನ ಕುಮಾರನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ಈಗ ಸಂಧಾನಪಡಿಸಿಕೊಂಡಿದ್ದಾನೆ; ಮತ್ತು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.


ಬೆಳಕಿನ ರಾಜ್ಯದೊಳಗೆ ದೇವಜನರ ಬಾಧ್ಯತೆಯಲ್ಲಿ ಪಾಲುಗಾರರಾಗುವದಕ್ಕೆ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇವೆ.


ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರ ಆದರಣೆಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.


ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ


ಇದನ್ನು ಮಾಡುವದಕ್ಕೆ ಇವರು ಇಷ್ಟಪಟ್ಟದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆಮಾಡುವ ಹಂಗಿನಲ್ಲಿದ್ದಾರಲ್ಲವೇ.


ಆದರೆ ಕೆಲವು ಕೊಂಬೆಗಳು ಮುರಿದುಹಾಕಲ್ಪಡಲು ಕಾಡೆಣ್ಣೇಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ;


ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿದಂತೆ ಅನ್ಯಜನರೊಳಗಿಂದ ಸಹ ಕರೆದನು.


ಆಮೇಲೆ ತೋಮನಿಗೆ - ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು; ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬದವನಾಗಿರಬೇಡ, ನಂಬುವವನಾಗು ಎಂದು ಹೇಳಿದನು.


ಯೆಹೋವನ ಆಲಯನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;


ಅವನು ಯೋಚಿಸಿ ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದರಿಂದ ಸಾಯನು, ಬಾಳೇ ಬಾಳುವನು.


ನರಪುತ್ರನೇ, ವಲಸೆಹೋಗುವದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು, ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು; ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ಮನಸ್ಸಿಗೆ ತಂದಾರು.


ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲ ಸ್ವಾವಿುಯೇ ಸೃಷ್ಟಿಸಿದ್ದಾನೆ ಎಂದು ಎಲ್ಲರೂ ಕಂಡು ತಿಳಿದು ಮನಮುಟ್ಟಿ ಗ್ರಹಿಸಿಕೊಳ್ಳುವರು.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ನಾವು ಕಂಡು ಕೇಳಿದ್ದು ನಿಮಗೂ ಗೊತ್ತಾಗಿ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -


ಸಾತ್ವಿಕವಾದ ಶಾಂತಮನಸ್ಸು ಎಂಬ ಒಳಗಣ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದು ಶಾಶ್ವತವಾದದ್ದೂ ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದೂ ಆಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯಿಟ್ಟ ಭಕ್ತೆಯರಾದ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದು ಯಾವ ಭೀತಿಗೂ ಗಾಬರಿಪಡದೆ ಒಳ್ಳೇದನ್ನೇ ಮಾಡುವವರಾಗಿದ್ದರು.


ಆದರೆ ಕ್ರಿಸ್ತನು ಈಗ ದೊರೆತಿರುವ ಮೇಲುಗಳನ್ನು ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಸೃಷ್ಟಿಗೆ ಸಂಬಂಧಪಡದಂಥ ಘನವಾಗಿಯೂ ಉತ್ಕೃಷ್ಟವಾಗಿಯೂ ಇರುವ ಗುಡಾರದಲ್ಲಿ ಸೇವೆಯನ್ನು ಮಾಡುವವನಾಗಿ


ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ನಮಗೋಸ್ಕರ ಮುಂದಾಗಿ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.


ರೊಟ್ಟಿಯು ಒಂದೇಯಾಗಿರುವದರಿಂದ ಅನೇಕರಾಗಿರುವ ನಾವು ಒಂದೇ ದೇಹದಂತಿದ್ದೇವೆ; ಯಾಕಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುತಕ್ಕೊಂಡು ತಿನ್ನುತ್ತೇವೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಈ ಸಹಾಯದಿಂದ ತೋರಿಬಂದ ನಿಮ್ಮ ಯೋಗ್ಯಭಾವವನ್ನು ಅವರು ನೋಡುವಾಗ ನೀವು ಮಾಡಿದ್ದ ಪ್ರತಿಜ್ಞೆಗೆ ಸರಿಯಾಗಿ ಕ್ರಿಸ್ತನ ಸುವಾರ್ತೆಯನ್ನು ಅನುಸರಿಸಿದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಧರ್ಮಶಾಸ್ತ್ರವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇವಿುಸುತ್ತದೆ; ಆದರೆ ಧರ್ಮಶಾಸ್ತ್ರದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ನೇವಿುಸುತ್ತದೆ.


ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು.


ಹೀಗಿರುವಲ್ಲಿ ಸಹೋದರರೇ, ಯೇಸು ನಮಗೋಸ್ಕರ ಪ್ರತಿಷ್ಠಿಸಿದ ಜೀವವುಳ್ಳ ಹೊಸ ದಾರಿಯಲ್ಲಿ ಆತನ ರಕ್ತದ ಮೂಲಕ ಆತನ ಶರೀರವೆಂಬ ತೆರೆಯ ಮುಖಾಂತರ ದೇವರ ಸಮಕ್ಷಮದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.


ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು.


ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು