Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:10 - ಕನ್ನಡ ಸತ್ಯವೇದವು J.V. (BSI)

10 ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಕೋಪಿಸಿಕೊಂಡು - ಅವರು ಯಾವಾಗಲೂ ಹೃದಯದಲ್ಲಿ ತಪ್ಪಿಹೋಗುವವರು ಎಂದು ಹೇಳಿದೆನು. ಆದರೆ ಅವರು ನನ್ನ ಮಾರ್ಗವನ್ನು ತಿಳುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಂತಲೇ ಆ ಜನರ ವಿರುದ್ಧ ಕೆರಳಿ ಇಂತೆಂದನು: ಹಾದಿ ತಪ್ಪಿದ ಹೃದಯಿಗಳು ಇವರೆಂದಿಗೂ, ಗ್ರಹಿಸಿಕೊಳ್ಳರಿವರು ಎನ್ನ ಮಾರ್ಗವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಅವರ ಮೇಲೆ ನಾನು ಕೋಪಗೊಂಡಿದ್ದೆನು. ‘ಅವರ ಆಲೋಚನೆಗಳು ಯಾವಾಗಲೂ ತಪ್ಪಾಗಿವೆ. ನನ್ನ ಮಾರ್ಗವನ್ನು ಅವರು ಅರ್ಥಮಾಡಿಕೊಳ್ಳಲೇ ಇಲ್ಲ’ ಎಂದು ನಾನು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನಾನು ಆ ಸಂತತಿಯವರ ಮೇಲೆ ಕೋಪಿಸಿಕೊಂಡು, ‘ಅವರು ಯಾವಾಗಲೂ ತಮ್ಮ ಹೃದಯದಲ್ಲಿ ತಪ್ಪಿಹೋಗುತ್ತಾರೆ, ಅವರು ನನ್ನ ಮಾರ್ಗಗಳನ್ನು ತಿಳಿದುಕೊಳ್ಳಲಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆ ಮನುನ್ ತ್ಯಾ ಲೊಕಾಂಚೊ ಮಾಕಾ ರಾಗ್ ಯೆಲೊ ಅನಿ ಸಂತಾಪಾನ್ ಮಿಯಾ, “ಕನ್ನಾಬಿ ತೆಂಚಿ ಮನಾ ಮಾಜೆಕ್ನಾ ಧುರುಚ್ ಹಾತ್; ತೆಂಚ್ಯಾನಿ ಮಾಜಿ ವಾಟಾ ಹುಡ್ಕುಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:10
20 ತಿಳಿವುಗಳ ಹೋಲಿಕೆ  

ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ನಾನು ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.


ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ; ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯಾಹುವಿಗೆ ಸ್ತೋತ್ರ!


ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.


ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾದರೆ ಇನ್ನು ನನಗೆ ಪಾಪಿಯೆಂದು ತೀರ್ಪಾಗುವದು ಯಾಕೆ?


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ ಅಲ್ಲಿ ಆತನನ್ನು ನೋಯಿಸಿದರು.


ಯೆಹೋವನು ನೋಡಿ ತಾನು ಭೂವಿುಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ಪಶ್ಚಾತ್ತಾಪಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಅಣ್ಣತಮ್ಮಂದಿರ ಮೇಲೆ ಸಿಟ್ಟುಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು