Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:16 - ಕನ್ನಡ ಸತ್ಯವೇದವು J.V. (BSI)

16 ಎಂಬದರಲ್ಲಿ ಕೇಳಿ ಕೋಪವನ್ನೆಬ್ಬಿಸಿದವರು ಯಾರು? ಮೋಶೆಯ ಕೈಕೆಳಗಿದ್ದು ಐಗುಪ್ತದೊಳಗಿಂದ ಹೊರಟುಬಂದವರೆಲ್ಲರೂ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಲ್ಲಿ, ದೇವರ ದನಿಯನು ಕೇಳಿಯೂ ದಂಗೆ ಎದ್ದವರು ಯಾರು? ಮೋಶೆಯ ಮುಂದಾಳತ್ವದಲ್ಲಿ ಈಜಿಪ್ಟ್ ದೇಶವನ್ನು ಬಿಟ್ಟುಬಂದ ಎಲ್ಲರೂ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರ ಸ್ವರವನ್ನು ಕೇಳಿಯೂ ಆತನಿಗೆ ವಿರುದ್ಧರಾದವರು ಯಾರು? ಮೋಶೆಯ ಮೂಲಕ ಈಜಿಪ್ಟಿನಿಂದ ಬಿಡುಗಡೆ ಹೊಂದಿದವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ದೇವರು ನುಡಿದದ್ದನ್ನು ಕೇಳಿ ಕೋಪಗೊಂಡು ವಿರೋಧಿಸಿದವರು ಯಾರು? ಆದರೂ ಮೋಶೆಯ ಮೂಲಕ ಈಜಿಪ್ಟಿನಿಂದ ಹೊರಟು ಬಂದವರೆಲ್ಲರೂ ಹಾಗೆ ಮಾಡಲಿಲ್ಲವಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಶೆ ರಾತಾನಾ ದೆವಾಚೊ ಧನ್ ಆಯ್ಕುನ್‍ಬಿ ತೆಚ್ಯಾ ವಿರೊದ್ ಜಾತಲೆ ಕೊನ್ ತೆ? ಮೊಯ್ಜೆ ಮುಖಂಡ್ ಹೊವ್ನ್ ಇಜಿಪ್ತ್ ಮನ್ತಲ್ಯಾ ದೆಶಾತ್ನಾ ಭಾಯ್ರ್ ಯೆಲ್ಲಿ ತಿ ಸಗ್ಳಿ ಲೊಕಾಚ್ ನ್ಹಯ್ ತಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:16
18 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೆಲ್ಲರೂ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟಿ - ನಾವು ಐಗುಪ್ತದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಈ ಅರಣ್ಯದಲ್ಲಿಯಾದರೂ ಸತ್ತಿದ್ದರೆ ಮೇಲಾಗಿತ್ತು.


ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವದಿಲ್ಲ.


ಆದರೆ ನಿನ್ನ ಶಿಷ್ಯನಾದ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲ್ಯರಿಗೆ ಆ ದೇಶವನ್ನು ಸ್ವಾಧೀನಪಡಿಸುವನು; ಆದದರಿಂದ ಅವನನ್ನು ಧೈರ್ಯಗೊಳಿಸು.


ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಿಗೆ ಪದೇಪದೇ ಅವಿಧೇಯರಾಗಿ ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನಷ್ಟೆ; ಆದದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಅವರಲ್ಲಿ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.


ನನ್ನ ದಾಸನಾದ ಕಾಲೇಬನು ಅಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದದ್ದರಿಂದ ಅವನನ್ನೇ ಅವನು ಸಂಚರಿಸಿದ ಆ ದೇಶದಲ್ಲಿ ಸೇರಿಸುವೆನು; ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ನಾವು ನಾಯಕನನ್ನು ನೇವಿುಸಿಕೊಂಡು ಐಗುಪ್ತದೇಶಕ್ಕೆ ತಿರಿಗಿ ಹೋಗೋಣ ಎಂದು ಮಾತಾಡಿಕೊಳ್ಳುತ್ತಿದ್ದರು.


ಯೆಹೋವನು ಮೋಶೆಗೆ - ಈ ಜನರು ಇನ್ನು ಎಷ್ಟರ ಮಟ್ಟಿಗೆ ನನ್ನನ್ನು ಅಲಕ್ಷ್ಯಮಾಡುವರೋ; ನಾನು ನಡಿಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರೋ.


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ ಅಲ್ಲಿ ಆತನನ್ನು ನೋಯಿಸಿದರು.


ಮತ್ತು ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಆಹಾ, ಅಲ್ಲಿನವರು ತಮಗೂ ನಿಮಗೂ ನಿಮ್ಮ ಪಿತೃಗಳಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡಿಸಿದ್ದರಿಂದ ಆ ಸ್ಥಳಗಳು ಹಾಳಾದವು. ಅಲ್ಲಿ ಯಾರೂ ವಾಸಿಸರು.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು