Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:8 - ಕನ್ನಡ ಸತ್ಯವೇದವು J.V. (BSI)

8 ನಿಮ್ಮ ಹಿರಿಯರು ದೇವರ ಕೋಪವನ್ನೆಬ್ಬಿಸಿದ ಸ್ಥಳದಲ್ಲಿ ಅರಣ್ಯದೊಳಗೆ ದೇವರನ್ನು ಪರೀಕ್ಷಿಸಿದ ದಿನದಲ್ಲಿ ಮಾಡಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮರುಭೂಮಿಯಲ್ಲವರು ದೇವರನು ಪರೀಕ್ಷಿಸಿದರು ಆತನ ವಿರುದ್ಧ ಅಲ್ಲೇ ದಂಗೆ ಎದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ. ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ ದಿನದಲ್ಲಿ ಕೋಪಕ್ಕೆ ಈಡುಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆಚ್ಯಾ ವಾಟೆಕ್ ವ್ಹಾಕ್ಡೆ ಗೆಲ್ಲ್ಯಾ ತ್ಯಾ ಎಳಾರ್ ಕರಲ್ಲ್ಯಾ ಸಾರ್ಕೆ ತಸೆ ಮಟ್ಲ್ಯಾರ್, ಡಂಗ್ಳಿತ್ ಪರಿಕ್ಷಾಚ್ಯಾ ದಿಸಾತ್ನಿ ಕರಲ್ಲ್ಯಾ ಸಾರ್ಕೆ ತುಮ್ಚಿ ಮನಾ ನಿಸ್ಟುರ್ ಕರುನಕಾಶಿ, ತುಮ್ಚ್ಯಾ ಪುರ್ವಜಾನಿ ದೆವಾಕ್ ವಿರೊದ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:8
28 ತಿಳಿವುಗಳ ಹೋಲಿಕೆ  

ಭಯದಿಂದ ನಡೆದುಕೊಳ್ಳುವವನು ಧನ್ಯನು; ಕಠಿನಹೃದಯನು ಕೇಡಿಗೆ ಸಿಕ್ಕಿಬೀಳುವನು.


ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಕೊಳ್ಳದೆ


ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಲ್ಲಿ ಸಂಶಯಾತ್ಮರಾಗಿ ದೇವರನ್ನು ಪರೀಕ್ಷಿಸಿದರು.


ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಆದರೆ ಫರೋಹನು ಉಪಶಮನವಾಯಿತೆಂದು ತಿಳಿದಾಗ ತನ್ನ ಹೃದಯವನ್ನು ಮೊಂಡುಮಾಡಿಕೊಂಡನು. ಯೆಹೋವನು ಹೇಳಿದ್ದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.


ಅರಣ್ಯದಲ್ಲಿ ಆಶಾತುರರಾಗಿ ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.


ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.


ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು; ನಾವು ಪರೀಕ್ಷಿಸದೆ ಇರೋಣ.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಆದರೂ ನಮ್ಮ ಪಿತೃಗಳು ಗರ್ವಿಗಳಾಗಿ ಹಟಹಿಡಿದು ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.


ಐಗುಪ್ತ್ಯರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.


ಯೆಹೋವನು ಮೋಶೆಗೆ - ಈ ಜನರು ಇನ್ನು ಎಷ್ಟರ ಮಟ್ಟಿಗೆ ನನ್ನನ್ನು ಅಲಕ್ಷ್ಯಮಾಡುವರೋ; ನಾನು ನಡಿಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರೋ.


ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.


ಅವರು ದೇವರಾದ ಯೆಹೋವನನ್ನು ನಂಬದೆ ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಆತನಿಗೆ ಕಿವಿಗೊಡದೆ ಹೋದರು;


ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ ಮಸ್ಸಾದಿನದಲ್ಲಿ ಮಾಡಿದಂತೆ ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.


ಅವನೇ ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡಿಸಿಕೊಂಡು ಬಂದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು