Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:11 - ಕನ್ನಡ ಸತ್ಯವೇದವು J.V. (BSI)

11 ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ನಮ್ಮಿಂದಾದಷ್ಟು ಪ್ರಯತ್ನಿಸೋಣ. ಆತನಿಗೆ ಅವಿಧೇಯರಾದ ಆ ಜನರನ್ನು ಅನುಸರಿಸಿ ನಮ್ಮಲ್ಲಿ ಯಾರೂ ವಿಫಲರಾಗದಂತೆ ನೋಡಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಸೆ ಹೊವ್ನ್ ಅಮಿ ತ್ಯಾ ಆರಾಮ್ಕಿತ್ ಭುತ್ತುರ್ ಗುಸುಕ್ ಖಪ್ಟಟ್ ಕರುನ್ಗೆತುಚ್ ರಾಂವಾ; ಅಮ್ಚ್ಯಾ ಭುತ್ತುರ್‍ಲೆ ಕೊನ್ಬಿ ಇಸ್ರಾಯೆಲಾಚ್ಯಾ ಲೊಕಾಂಚೆ ಬಗುನ್ ಶಿಕುನ್ ವಿಶ್ವಾಸ್‍ ನಸಲ್ಲ್ಯಾ ವಾಟೆಕ್ ಜಾತಲೆ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:11
22 ತಿಳಿವುಗಳ ಹೋಲಿಕೆ  

ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ. ನನ್ನ ವಿಶ್ರಾಂತಿಯಲ್ಲಿ ನೀವು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಪ್ರಮಾಣಮಾಡಿದನು? ಅವಿಧೇಯರನ್ನು ಕುರಿತಲ್ಲವೇ.


ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವದಕ್ಕೆ ಹೆಣಗಾಡಿರಿ. ಬಹುಜನ ಒಳಕ್ಕೆ ಹೋಗುವದಕ್ಕೆ ನೋಡುವರು, ಆದರೆ ಅವರಿಂದಾಗುವದಿಲ್ಲ ಎಂದು ನಿಮಗೆ ಹೇಳುತ್ತೇನೆ.


ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ.


ಹುರುಳಿಲ್ಲದ ಮಾತುಗಳನ್ನಾಡುವವರಿಗೆ ಕಿವಿಗೊಟ್ಟು ಮೋಸಹೋಗಬೇಡಿರಿ; ಅಂಥ ಕೃತ್ಯಗಳ ನಿವಿುತ್ತದಿಂದ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಇವುಗಳ ನಿವಿುತ್ತ ದೇವರ ಕೋಪವು ಉಂಟಾಗುತ್ತದೆ.


ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ


ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಈಚೆಗೆ ದೇವರ ರಾಜ್ಯವು ಸಾರಲ್ಪಡುತ್ತಾ ಇದೆ. ಅದರಲ್ಲಿ ಸಕಲರೂ ಬಲಾತ್ಕಾರವಾಗಿ ನುಗ್ಗುತ್ತಾರೆ.


ಇದಲ್ಲದೆ ಸ್ನಾನಿಕನಾದ ಯೋಹಾನನ ಕಾಲದಿಂದ ಈವರೆಗೂ ಪರಲೋಕರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿರುತ್ತದೆ; ಬಲಾತ್ಕಾರಿಗಳು ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳುತ್ತಾರೆ.


ಇಕ್ಕಟ್ಟಾದ ಬಾಗಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಲು ದೊಡ್ಡದು, ದಾರಿ ಅಗಲವು; ಅದರಲ್ಲಿ ಹೋಗುವವರು ಬಹು ಜನ.


ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಹೀಗಿರಲಾಗಿ ಆ ವಿಶ್ರಾಂತಿಯಲ್ಲಿ ಕೆಲವರು ಸೇರಬೇಕೆಂಬುವ ಮಾತು ಇನ್ನೂ ಇರುವದರಿಂದಲೂ ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದದ್ದರಿಂದಲೂ


ಆತನು ಸೊದೋಮ್‍ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಮುಂದೆ ಭಕ್ತಿಹೀನರಾಗಿ ಬದುಕುವವರ ಗತಿ ಇಂಥದೆಂದು ಸೂಚಿಸುವದಕ್ಕಾಗಿ ಅವುಗಳಿಗೆ ನಾಶನವನ್ನು ವಿಧಿಸಿದನು.


ಹಿಂದಿರುಗಿ ಬಂದು ಯೆಹೋಶುವನಿಗೆ - ಎಲ್ಲಾ ಜನರು ಹೋಗುವದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರು ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವದೇಕೆ? ಅವರು ಸ್ವಲ್ಪ ಮಂದಿ ಮಾತ್ರ ಇರುತ್ತಾರೆ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು