Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:6 - ಕನ್ನಡ ಸತ್ಯವೇದವು J.V. (BSI)

6 ಹೀಗಿರಲಾಗಿ ಆ ವಿಶ್ರಾಂತಿಯಲ್ಲಿ ಕೆಲವರು ಸೇರಬೇಕೆಂಬುವ ಮಾತು ಇನ್ನೂ ಇರುವದರಿಂದಲೂ ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದದ್ದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ, ಈ ವಿಶ್ರಾಂತಿಯ ನೆಲೆಯನ್ನು ಸೇರುವ ಸಾಧ್ಯತೆ ಬೇರೆಯವರಿಗಾದರೂ ಇದೆ ಎಂಬುದು ಸ್ಪಷ್ಟವಾಗುತ್ತದೆ. ದೇವರ ವಾಕ್ಯವನ್ನು ಮೊದಲು ಕೇಳಿದವರಾದರೋ, ತಮ್ಮ ಅವಿಶ್ವಾಸದಿಂದ ಅದನ್ನು ಸೇರದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುತ್ತಾರೆಂಬುದು ಇನ್ನೂ ಖಚಿತವಾಗಿದೆ. ಆದರೆ ರಕ್ಷಣಾಮಾರ್ಗವನ್ನು ಮೊದಲು ಕೇಳಿದ ಜನರು ಪ್ರವೇಶಿಸಲಿಲ್ಲ. ಅವರು ವಿಧೇಯರಾಗದೆ ಇದ್ದುದರಿಂದ ಅವರು ಸೇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಯಾರಿಗೆ ಮೊದಲು ಸುವಾರ್ತೆಯು ಸಾರಲಾಯಿತೋ ಅವರು ಅವಿಧೇಯತೆಯ ನಿಮಿತ್ತ ಆ ವಿಶ್ರಾಂತಿಯಲ್ಲಿ ಸೇರದೆಹೋದರು. ಆದರೂ ಕೆಲವರು ಆ ವಿಶ್ರಾಂತಿಯಲ್ಲಿ ಪ್ರವೇಶಿಸುವ ಅವಕಾಶ ಇನ್ನೂ ಇರುವುದರಿಂದ ಅವರು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಸೆ ಹೊಲ್ಯಾರ್ ಕೊನ್ ತರ್‍ಬಿ ಹ್ಯಾ ಆರಾಮಾತ್ ಜಾವ್ನ್ ಪಾವುಕ್‍ಪಾಜೆ ದೆವಾಚಿ ಬರಿ ಖಬರ್ ಅದ್ದಿ ಆಯ್ಕಲ್ಲ್ಯಾನಿ, ವಿಶ್ವಾಸ್ ಕರುನಸಲ್ಲ್ಯಾಸಾಟಿ ಆರಾಮಾತ್ ಭುತ್ತುರ್ ಗುಸುಕ್ ತೆಂಚ್ಯಾನ್ ಹೊವ್ಕ್ ನಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:6
14 ತಿಳಿವುಗಳ ಹೋಲಿಕೆ  

ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.


ಅವರಿಗೆ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆಹೋದ ಕಾರಣ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು.


ಆದದರಿಂದ ದೇವರ ಜನರು ಅನುಭವಿಸುವದಕ್ಕಿರುವ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.


ದೇವರು ಅನ್ಯಜನರನ್ನು ನಂಬಿಕೆಯ ನಿವಿುತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ - ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು; ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭೋಗಿಸುವರು.


ಆಗಲಿ, ನಾನು ಇವರಿಗೆ ವ್ಯಾಧಿಯನ್ನುಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು ಎಂದು ಹೇಳಿದನು.


ಸಹೋದರರೇ, ನಾನು ಹೇಳುವದೇನಂದರೆ - ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, ಅಳುವವರು ಅಳದವರಂತೆಯೂ,


ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು