Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:8 - ಕನ್ನಡ ಸತ್ಯವೇದವು J.V. (BSI)

8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆಹೋಶುವನು ಆ ಜನರನ್ನು ವಾಗ್ದತ್ತ ವಿಶ್ರಾಂತಿಗೆ ಸೇರಿಸಿದ್ದರೆ ದೇವರು ಬೇರೊಂದು ದಿನವನ್ನು ಗೊತ್ತುಮಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ವಾಗ್ದಾನ ಮಾಡಿದ್ದ ವಿಶ್ರಾಂತಿಗೆ ಯೆಹೋಶುವನು ಜನರನ್ನು ಕರೆದೊಯ್ದಿದ್ದರೆ ವಿಶ್ರಾಂತಿಯ ಮತ್ತೊಂದು ದಿನದ ಕುರಿತು ಹೇಳುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ದೇವರು ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೊಶ್ವಾನ್ ತೆಂಕಾ ಹ್ಯೊ ಆರಾಮ್ ದಿಲ್ಲ್ಯಾನ್ ಹೊಲ್ಯಾರ್, ಅನಿ ಎಗ್ದಾ ಅನಿ ಎಕ್ ದಿಸಾಚ್ಯಾ ವಿಶಯಾತ್ ದೆವ್ ಅಶೆಚ್ ಬೊಲಿನಶಿ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:8
13 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿಹೊಂದಿದನಂತರ ಯೆಹೋವನ ಸೇವಕನಾದ ಮೋಶೆಯು ನಿಮಗೆ ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಬಹುದು ಎಂಬದೇ.


ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿದ್ದದರಿಂದ ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟ ಸ್ವಾಸ್ತ್ಯದಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವಾಸ್ತ್ಯಕ್ಕೆ ಸೇರಿ ನೀವು ಇನ್ನು ವಿಶ್ರಾಂತಿ ಹೊಂದಲಿಲ್ಲವಲ್ಲಾ.


ಯೆಹೋವನು ಸುತ್ತಣ ವಿರೋಧಿಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹುದಿನಗಳು ಗತಿಸಿದ ಮೇಲೆ


ನಮ್ಮ ಹಿರಿಯರು ಅದನ್ನು ತಮ್ಮ ತಂದೆಗಳಿಂದ ಹೊಂದಿದರು; ಅವರು ಯೆಹೋಶುವನ ಹಿಂದೆ ಬಂದು ದೇವರು ತಮ್ಮ ಮುಂದೆ ಹೊರಡಿಸಿದ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಇಲ್ಲೇ ಇತ್ತು.


ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಮತ್ತು ಆತನು ಅವರಿಗೆ ಪರಜನರ ದೇಶಗಳನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರಿಗೆ ಕೈ ಸೇರಿತು.


ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಪುರಾತನಕಾಲದಲ್ಲಿ ನಮ್ಮ ಪಿತೃಗಳ ಸಂಗಡ ಪ್ರವಾದಿಗಳ ಬಾಯಿಂದ ಭಾಗಭಾಗವಾಗಿಯೂ ವಿಧವಿಧವಾಗಿಯೂ ಮಾತಾಡಿದ ದೇವರು


ಆದದರಿಂದ ದೇವರ ಜನರು ಅನುಭವಿಸುವದಕ್ಕಿರುವ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.


ಇವನ ಮಗನು ಎಲೀಷಾಮ; ಇವನ ಮಗನು ನೋನ್; ಇವನ ಮಗನು ಯೆಹೋಷುವ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು