ಇಬ್ರಿಯರಿಗೆ 5:12 - ಕನ್ನಡ ಸತ್ಯವೇದವು J.V. (BSI)12 ಕಾಲವನ್ನು ನೋಡಿದರೆ ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಹೆ ಸೊಡ್ಲ್ಯಾರ್ ತುಮಿ ದುಸ್ರ್ಯಾಕ್ನಿ ಶಿಕ್ವುತಲಿ ಲೊಕಾ ಹೊತಲೆ ಹೊತ್ತೆ, ಖರೆ ದೆವಾಚ್ಯಾ ಅದ್ದಿಚ್ಯಾ ಬಾತ್ಮಿಚಿ ಸಮಜ್ ಅನಿ ಪರ್ತುನ್ ತುಮ್ಕಾ ದಿವ್ಕ್ ಅನಿ ಎಕ್ಲ್ಯಾಚಿ ಗರಜ್ ಪಡಲ್ಲಿ ಹಾಯ್, ಘಟ್ಲ್ಯಾ ಜೆವ್ನಾಚ್ಯಾ ಬದ್ಲಾಕ್ ತುಮ್ಕಾ ಅಜುನ್‍ಬಿ ದುದ್ದಾಚಿ ಗರಜ್ ಹಾಯ್. ಅಧ್ಯಾಯವನ್ನು ನೋಡಿ |