ಇಬ್ರಿಯರಿಗೆ 5:14 - ಕನ್ನಡ ಸತ್ಯವೇದವು J.V. (BSI)14 ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ ಅಂದರೆ ಜ್ಞಾನೇಂದ್ರಿಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಇದು ಒಳ್ಳೇದು ಅದು ಕೆಟ್ಟದ್ದು ಎಂಬ ಭೇದವನ್ನು ತಿಳಿದವರಿಗೋಸ್ಕರವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಘಟ್ಲೆ ಜೆವಾನ್ ಮೊಟೆ ಹೊಲ್ಲ್ಯಾಕ್ನಿ; ಪಾಜೆ ಹೊಲ್ಲೊ ತವ್ಡೊ ಅನ್‍ಬೊಗ್ ಕರುನ್ ಖಲೆ ಬರೆ ಖಲೆ ವಾಯ್ಟ್ ಮನ್ತಲಿ ಸಮಜ್ ಹೊತ್ತ್ಯಾಕ್ನಿ ತೆ. ಅಧ್ಯಾಯವನ್ನು ನೋಡಿ |