Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:2 - ಕನ್ನಡ ಸತ್ಯವೇದವು J.V. (BSI)

2 ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರನ್ನೂ ಮಾರ್ಗತಪ್ಪಿ ನಡೆಯುವವರನ್ನೂ ತಾಳ್ಮೆಯಿಂದ ಸಹಿಸಿಕೊಳ್ಳುವದಕ್ಕೆ ಶಕ್ತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಜನರೆಲ್ಲರಂತೆ ದುರ್ಬಲನಾಗಿರುವುದರಿಂದ ಅರ್ಥಮಾಡಿಕೊಳ್ಳದ ಮತ್ತು ದಾರಿತಪ್ಪಿದ ಜನರ ವಿಷಯದಲ್ಲಿ ತಾಳ್ಮೆಯಿಂದ ಸಹಿಸಿಕೊಳ್ಳಲು ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊಚ್ ಬಳ್ ನಸಲ್ಲ್ಯಾ ಸಾರ್ಕೊ ಹೊಲ್ಲ್ಯಾ ವೈನಾ ಗೊತ್ತ್ ನಸಲ್ಲ್ಯಾಕ್ನಿ ಅನಿ ಚುಕುನ್ ಪಡಲ್ಯಾಕ್ನಿ ದಯಾ ದಾಕ್ವುನ್ ತೆಚ್ಯಾನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:2
24 ತಿಳಿವುಗಳ ಹೋಲಿಕೆ  

ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.


ಧರ್ಮಶಾಸ್ತ್ರವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇವಿುಸುತ್ತದೆ; ಆದರೆ ಧರ್ಮಶಾಸ್ತ್ರದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ನೇವಿುಸುತ್ತದೆ.


ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಹೀಗೆ ಮಾಡಿದರೆ ಕುಂಟಕಾಲು ಉಳುಕಿಹೋಗದೆ ವಾಸಿಯಾಗುವದು.


ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ಸರ್ತಿ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.


ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳಪಡುವದಿಲ್ಲ.


ನಾನು ಹೊಗಳಿಕೊಳ್ಳಬೇಕಾದರೆ ನನ್ನ ಬಲಹೀನತೆಯನ್ನು ತೋರ್ಪಡಿಸುವ ವಿಷಯಗಳಲ್ಲಿ ಹೊಗಳಿಕೊಳ್ಳುವೆನು.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.


[ನೀವು ಹಿಡಿದಿರುವ] ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹದ ಬಸವನನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದನು.


ಇಸ್ರಾಯೇಲ್ಯರು ಅವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪಿತೃಗಳ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು; ಅವರಂತೆ ನಡೆಯಲೇ ಇಲ್ಲ.


ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣುಗುಟ್ಟುವವರು ಉಪದೇಶವನ್ನು ಗಮನಿಸುವರು ಎಂದು ಹೇಳುತ್ತಾನೆ.


ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ, ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.


ನನ್ನ ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯಮಾರ್ಗವನ್ನು ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ -


ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು