Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:6 - ಕನ್ನಡ ಸತ್ಯವೇದವು J.V. (BSI)

6 ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ - ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರೇ ಮತ್ತೊಂದು ಕಡೆಯಲ್ಲಿ : “ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ,” ಎಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ ದೇವರು ಹೀಗೆನ್ನುತ್ತಾನೆ: “ನೀನು ಮೆಲ್ಕಿಜೆದೇಕನಂತೆ ಸದಾಕಾಲವೂ ಪ್ರಧಾನಯಾಜಕನಾಗಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಸೆಚ್ ಅನಿ ಎಕಾಕ್ಡೆಬಿ ತೊ ಮನ್ತಾ, ತಿಯಾ ಸದಾಸರ್ವತಾಕ್ ಪತರ್ ಮೆಲ್ಕಿಸದೆಕಾಚ್ಯಾ ಪಂಗಡಾಚೊ ಯಾಜಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:6
10 ತಿಳಿವುಗಳ ಹೋಲಿಕೆ  

ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.


ಆತನ ವಿಷಯದಲ್ಲಿ - ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ


ಅವನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ಜನ್ಮದ ಆರಂಭವೂ ಆಯುಷ್ಯದ ಅಂತ್ಯವೂ ಇಲ್ಲ. ಅವನು ದೇವರ ಮಗನಿಗೆ ಸಮಾನ ಮಾಡಲ್ಪಟ್ಟಿದ್ದಾನೆ. ಅವನು ನಿರಂತರವಾಗಿ ಯಾಜಕನಾಗಿರುವವನು.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ನಮಗೋಸ್ಕರ ಮುಂದಾಗಿ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ಇದಲ್ಲದೆ ಬೇರೊಬ್ಬ ಯಾಜಕನು ಶರೀರಧರ್ಮ ವಿಷಯವಾದ ನಿಯಮದ ಪ್ರಕಾರವಾಗಿರದೆ ಮೆಲ್ಕಿಜೆದೇಕನ ಸಾದೃಶ್ಯದಲ್ಲಿ ನಿರ್ಲಯವಾದ ಜೀವದ ಶಕ್ತಿಯುಳ್ಳವನಾಗಿದ್ದು ಬರಬೇಕಾದದರಿಂದ ನಮ್ಮ ಸಿದ್ಧಾಂತ ಮತ್ತೂ ಸ್ವಷ್ಟವಾಯಿತು.


ಇದಲ್ಲದೆ ಲೇವಿಯರ ಕ್ರಮವನ್ನು ನೋಡಿದರೆ ಸಾಯತಕ್ಕ ಮನುಷ್ಯರು ದಶಮಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಮೆಲ್ಕಿಜೆದೇಕನ ಕ್ರಮವನ್ನು ನೋಡಿದರೆ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವವನು ತಕ್ಕೊಳ್ಳುತ್ತಾನೆ.


ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು