Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:1 - ಕನ್ನಡ ಸತ್ಯವೇದವು J.V. (BSI)

1 ಆದದರಿಂದ ನಿರ್ಜೀವಕರ್ಮಗಳ ಮೇಲಣ ನಂಬಿಕೆಯನ್ನು ಬಿಟ್ಟುಬಿಟ್ಟು ದೇವರಲ್ಲಿಯೇ ನಂಬಿಕೆಯಿಡಬೇಕಾದದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1-2 ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಕೃತ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಹೊವ್ನ್, ಕ್ರಿಸ್ತಾಚ್ಯಾ ವಿಶಯಾತ್ ಶುರು ಹೊಲ್ಲ್ಯಾ ಪಾಟಾಚೆ ಶಿಕಾಪ್ ಸೊಡುನ್ ಅಮಿ ಸಗ್ಳ್ಯಾಪವಿತ್ರತಾ ಕಡೆ ಫಿಡೆ ಜಾಂವಾ, ಜಿವ್ ನಸಲ್ಯಾ ಕಾಮಾನಿತ್ನಾ ಪರ್ತುನ್ ಯೆತಲೆ ದೆವಾಚೆರ್ ವಿಶ್ವಾಸ್ ಥವ್ನ್ ಅಮ್ಚೊ ಜಿವನ್ ಕ್ರಿಸ್ತಾಕ್ನಾ ಶುರು ಕರುಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:1
50 ತಿಳಿವುಗಳ ಹೋಲಿಕೆ  

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಹೀಗೆ ಮಾಡಿದರೆ ಕುಂಟಕಾಲು ಉಳುಕಿಹೋಗದೆ ವಾಸಿಯಾಗುವದು.


ಯೋಹಾನನು ಧರ್ಮಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು, ನೀವು ಅವನನ್ನು ನಂಬಲಿಲ್ಲ; ಭ್ರಷ್ಟರೂ ಸೂಳೆಯರೂ ಅವನನ್ನು ನಂಬಿದರು; ನೀವು ಇದನ್ನು ನೋಡಿದಾಗ್ಯೂ ಪಶ್ಚಾತ್ತಾಪಪಡಲಿಲ್ಲ, ಅವನನ್ನು ನಂಬಲಿಲ್ಲ.


ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?


ದೇವಜನರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸಭೆಯ ಸೇವೆಗೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೋಸ್ಕರವೂ ಆತನು ಇವರನ್ನು ಅನುಗ್ರಹಿಸಿದನು.


ಯೇಸು ಕೂಗಿ ಹೇಳಿದ ಮಾತು ಏನಂದರೆ - ನನ್ನನ್ನು ನಂಬಿದವನು ನನ್ನನ್ನೇ ನಂಬುವವನಲ್ಲ; ನನ್ನನ್ನು ಕಳುಹಿಸಿಕೊಟ್ಟಾತನನ್ನು ನಂಬುವವನಾಗಿದ್ದಾನೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ದೇವರ ಚಿತ್ತಾನುಸಾರವಾಗಿರುವ ದುಃಖವು ಮಾನಸಾಂತರವನ್ನುಂಟುಮಾಡಿ ರಕ್ಷಣೆಗೆ ಕಾರಣವಾಗಿದೆ; ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ಅವರು ಹೊರಟುಹೋಗಿ ಜನರಿಗೆ - ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸಾರಿ


ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾದ ಸುವಾರ್ತೆಯ ಪ್ರಾರಂಭವು.


ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.


ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನಿಂದಾಗುವ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಆ ತಾಳ್ಮೆಯು ಸಿದ್ಧಿಗೆ ಬರಲಿ; ಆಗ ನೀವು ಶಿಕ್ಷಿತರೂ ಸರ್ವಸುಗುಣವುಳ್ಳವರೂ ಏನೂ ಕಡಿಮೆಯಿಲ್ಲದವರೂ ಆಗಿರುವಿರಿ.


ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ದೇವರ ಬಳಿಗೆ ಬರುವವನು ದೇವರು ಇದ್ದಾನೆ, ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬುವದು ಅವಶ್ಯ.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.


ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ.


ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದದರಿಂದ ಅದು ಬೀಳಲಿಲ್ಲ.


ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಅವನು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು; ಹೊಳೆಬಂದು ಪ್ರವಾಹವು ಆ ಮನೆಗೆ ಬಡಿದಾಗ್ಯೂ ಅದು ಚೆನ್ನಾಗಿ ಕಟ್ಟಿದ್ದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಅವನು - ನಾನು ಹೋಗುವದಿಲ್ಲವೆಂದು ಹೇಳಿದಾಗ್ಯೂ ತರುವಾಯ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.


ಆದರೂ ಪ್ರವೀಣರಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಇಲ್ಲದೆ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ. ಅದು ಸಮಸ್ತವನ್ನು ಸಂಪೂರ್ಣಮಾಡುವ ಬಂಧವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು