ಇಬ್ರಿಯರಿಗೆ 6:10 - ಕನ್ನಡ ಸತ್ಯವೇದವು J.V. (BSI)10 ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತುಮಿ ದೆವಾಚ್ಯಾ ಲೊಕಾಕ್ನಿ ಸ್ವಾಗತ್ ಕರುನ್ ಬರೆ ಬಗುನ್ ಘೆಟ್ಲ್ಯಾಸಿ, ಅಜುನ್ ಬಿ ಬಗುಲ್ಲ್ಯಾಸಿ, ಹೆ ಕಾಮ್ ತುಮಿ ದೆವಾಚ್ಯಾ ನಾವಾಚ್ಯಾ ವಿಶಯಾತ್ ದಾಕ್ವುಲ್ಲೊ ಪ್ರೆಮ್, ಇಸ್ರುಕ್ ದೆವ್ ಇಸರ್‍ತಲೊ ನ್ಹಯ್, ಅನಿ ದೆವ್ ಅನ್ನ್ಯಾಯ್ ಕರ್ನಾರೊ ನ್ಹಯ್. ಅಧ್ಯಾಯವನ್ನು ನೋಡಿ |