Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:11 - ಕನ್ನಡ ಸತ್ಯವೇದವು J.V. (BSI)

11 ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವು ಹೊಂದಿರುವ ನಿರೀಕ್ಷೆ ಪೂರ್ಣವಾಗಿ ಕೈಗೂಡುವಂತೆ ನಿಮ್ಮಲ್ಲಿ ಪ್ರತಿಯೊಬ್ಬನೂ ಮೊದಲಿನ ಆಸಕ್ತಿಯನ್ನು ಕಡೆಯತನಕವೂ ತೋರಿಸಬೇಕೆಂದು ಹಾರೈಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿಮ್ಮಲ್ಲಿ ಪ್ರತಿಯೊಬ್ಬರು ತಮ್ಮ ಇಡೀ ಜೀವನದಲ್ಲಿ ಇದೇ ಆಸಕ್ತಿಯುಳ್ಳವರಾಗಿ ನಿಮ್ಮ ನಿರೀಕ್ಷೆಯನ್ನು ದೃಢಪಡಿಸಿಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತುಮ್ಚ್ಯಾತ್ಲೊ ಹರ್ ಎಕ್ಲೊಬಿ ತ್ಯಾಚ್ ಉಮ್ಮೆದಿನ್ ರ್‍ಹಾವ್ನ್ ತುಮ್ಚ್ಯಾ ಸಗ್ಳ್ಯಾ ಜಿವನಾತ್ ತುಮ್ಚೊ ಬರೊಸೊ ಘಟ್ ಕರುನ್ ಘೆವ್ನ್ ರ್‍ಹಾವ್ಚೆ ಮನುನ್ ಅಮಿ ಅಶ್ಯಾ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:11
36 ತಿಳಿವುಗಳ ಹೋಲಿಕೆ  

ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಯಾವನು ಜಯಶಾಲಿಯಾಗಿದ್ದು ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೇವರೆಗೂ ನಡಿಸುತ್ತಾನೋ ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.


ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಸಹೋದರರೇ, ನೀವಾದರೋ ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು.


ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.


ನಮ್ಮಲ್ಲಿ ಪ್ರವೀಣರಾದವರು ಇದೇ ಅಭಿಪ್ರಾಯವುಳ್ಳವರಾಗಿರೋಣ. ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.


ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ಹೀಗಿರುವದರಿಂದ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಇವುಗಳಲ್ಲಿ ದೊಡ್ಡದು ಪ್ರೀತಿಯೇ.


ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ನಾವು ಸತ್ಯಕ್ಕೆ ಸೇರಿದವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ.


ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಬೋಧಿಸುವವನು ಬೋಧಿಸುವದರಲ್ಲಿಯೂ ಬುದ್ಧಿ ಹೇಳುವವನು ಬುದ್ಧಿ ಹೇಳುವದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ಹಿರೀತನ ನಡಿಸುವವನು ಆಸಕ್ತಿಯಿಂದ ನಡಿಸಲಿ. ಕಷ್ಟದಲ್ಲಿರುವವರಿಗೆ ಉಪಕಾರ ಮಾಡುವವನು ಸಂತೋಷವಾಗಿ ಮಾಡಲಿ.


ನಾವೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವದೆಂದು ಎದುರುನೋಡುತ್ತೇವೆ.


ಶ್ರೀಮತ್ ಥೆಯೊಫಿಲನೇ, ನಮ್ಮಲ್ಲಿ ನಿಶ್ಚಯಕ್ಕೆ ಬಂದಿರುವ ಕಾರ್ಯಗಳನ್ನು ಮೊದಲಿಂದ ಕಣ್ಣಾರೆ ಕಂಡು ಸುವಾರ್ತಾ ವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಕಾರ್ಯಗಳನ್ನು ಚರಿತ್ರ ರೂಪವಾಗಿ ಬರೆಯುವದಕ್ಕೆ ಅನೇಕರು ಪ್ರಯತ್ನಿಸಿರಲಾಗಿ


ಹಿಂದಿರುಗಿ ಬಂದು ಯೆಹೋಶುವನಿಗೆ - ಎಲ್ಲಾ ಜನರು ಹೋಗುವದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರು ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವದೇಕೆ? ಅವರು ಸ್ವಲ್ಪ ಮಂದಿ ಮಾತ್ರ ಇರುತ್ತಾರೆ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು