Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:13 - ಕನ್ನಡ ಸತ್ಯವೇದವು J.V. (BSI)

13 ದೇವರು ಅಬ್ರಹಾಮನಿಗೆ ವಾಗ್ದಾನಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದರಿಂದ ತನ್ನಾಣೆಯಿಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಅಬ್ರಹಾಮನಿಗೆ ಒಂದು ವಾಗ್ದಾನ ಮಾಡಿದನು. ದೇವರಿಗಿಂತ ದೊಡ್ಡವನಿಲ್ಲ. ಆದ್ದರಿಂದ, ದೇವರು ತನ್ನ ಮೇಲೆಯೇ ಆಣೆಯಿಟ್ಟು ತನ್ನ ಮಾತಿನಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮಗಿಂತಲೂ ಹೆಚ್ಚು ದೊಡ್ಡವರಾರೂ ಇಲ್ಲದ್ದರಿಂದ ತಮ್ಮ ಮೇಲೆ ಆಣೆಯಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವಾನ್ ಅಬ್ರಾಹಾಮಾಕ್ ಗೊಸ್ಟ್ ದಿಲ್ಲ್ಯಾ ತನ್ನಾ, ದೆವಾನ್‍ಕ್ಕಿಂತಾ ಮೊಟೊ ಕೊನ್ಬಿ ನಾ ಮನುನ್ ಸಾಂಗ್ಲ್ಯಾನ್, ಅನಿ ಅಪ್ನಾಚ್ಯಾ ಸ್ವತಾಚ್ಯಾ ನಾವಾ ವೈರುಚ್ ಆನ್ ಥವ್ನ್ ದಿಲ್ಲ್ಯಾ ಗೊಸ್ಟಿ ಸಾರ್ಕೆಚ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:13
15 ತಿಳಿವುಗಳ ಹೋಲಿಕೆ  

ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ. ಇದು ಯೆಹೋವನ ನುಡಿ.


ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.


ಬಹುಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಆ ನೀರನ್ನು ಕಲಕಲಿಕ್ಕೆ ಇನ್ನು ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಡನು, ಯಾವ ಪಶುವೂ ಗೊರಸಿಕ್ಕದು.


ಬೊಚ್ರವು ಹಾಳುಬಿದ್ದು ಬೆರಗಿಗೂ ನಿಂದೆಗೂ ಶಾಪಕ್ಕೂ ಗುರಿಯಾಗಿ ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶನವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ - ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನಿರನು ಎಂಬದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.


ಸಹೋದರರೇ, ಲೋಕದ ವ್ಯವಹಾರವನ್ನು ಹಿಡಿದು ಮಾತಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ, ಅದಕ್ಕೆ ಹೆಚ್ಚು ಮಾತುಗಳನ್ನು ಕೂಡಿಸುವದಿಲ್ಲ.


ಆ ಬಾಧ್ಯತೆಯು ಕರ್ಮಮಾರ್ಗದಿಂದ ದೊರೆಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯುವದಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು