Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:14 - ಕನ್ನಡ ಸತ್ಯವೇದವು J.V. (BSI)

14 ನಿಜವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಹೆಚ್ಚಿಸಿಯೇ ತೀರುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ಅವನಿಗೆ, “ನಾನು ನಿಜವಾಗಿಯೂ ನಿನ್ನನ್ನು ಆಶೀರ್ವದಿಸುತ್ತೇನೆ. ಅನೇಕಾನೇಕ ಸಂತತಿಗಳನ್ನು ನಿನಗೆ ದಯಪಾಲಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನ ಸಂತಾನವನ್ನು ಹೆಚ್ಚಿಸೇ ಹೆಚ್ಚಿಸುವೆನು,” ಎಂದು ಹೇಳಿದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ಮಿಯಾ ತುಕಾ ಖರೆಚ್ ಅಸಿ ಆಶಿರ್ವಾದ್ ಕರ್‍ತಾ, ಅನಿ ತುಕಾ ಲೈ ಬಳಗ್ ದಿತಾ” ಮನುನ್ ದೆವಾನ್ ಅಬ್ರಾಹಾಮಾಕ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:14
10 ತಿಳಿವುಗಳ ಹೋಲಿಕೆ  

ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟಾದಿರಲ್ಲಾ.


ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಷ್ಟು ಹೆಚ್ಚಿಸಿ - ನೀವು ಈ ದೇಶದೊಳಕ್ಕೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳುವಿರಿ ಎಂದು ಅವರ ಪಿತೃಗಳಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದಿ.


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ಕೊಡುವೆನು ಅಂದನು.


ನಾನು ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನಾಂಗಗಳು ನಿನ್ನಿಂದುಂಟಾಗುವಂತೆ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವೆನು ಎಂದು ಹೇಳಿದನು.


ಯೆಹೋವನು ನುಡಿದದ್ದನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕೆ ಹಿಂದೆಗೆಯದೆ ಹೋದದ್ದರಿಂದ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು;


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


ಆ ಬಾಧ್ಯತೆಯು ಕರ್ಮಮಾರ್ಗದಿಂದ ದೊರೆಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯುವದಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು