ಇಬ್ರಿಯರಿಗೆ 6:18 - ಕನ್ನಡ ಸತ್ಯವೇದವು J.V. (BSI)18 ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ದೆವಾಕ್ನಾ ಆದಾರ್ ಘೆವ್ಚೆ ಮನುನ್ ಪಳುನ್ ಯೆವ್ನ್, ಅಮ್ಚ್ಯಾ ಫಿಡೆ ಥವಲ್ಲೊ ಬರೊಸೊ ದರುನ್ ಘೆಟಲ್ಲ್ಯಾ ಅಮ್ಕಾ ಆಧಾರ್ ಹೊತ್ತ್ಯಾ ಸಾಟ್ನಿ ಘಟ್ಟ್ ಮುಟ್ಟ್ ಧೈರ್ಯ್ ಹೊಲಾ, ದೆವ್ ಝುಟೆ ಬೊಲಿನಾ ತಸೆಹೊವ್ನ್ ಆಧಾರ್ ಘೆವ್ಚೆ ಮನುನ್ ಅಮ್ಚ್ಯಾ ಫಿಡೆ ಥವಲ್ಲೊ ಬರೊಸೊ ಧರುನ್ ಘೆಟಲ್ಲೆ ಹೊವ್ನ್ ಅಮ್ಕಾ ಮೊಟಿ ಉಮ್ಮೆದ್ ಹೊಲಾ. ಅಧ್ಯಾಯವನ್ನು ನೋಡಿ |