Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:2 - ಕನ್ನಡ ಸತ್ಯವೇದವು J.V. (BSI)

2 ಸ್ನಾನ, ಹಸ್ತಾರ್ಪಣಗಳ ವಿಷಯವಾದ ಉಪದೇಶ, ಸತ್ತವರಿಗೆ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಉಂಟೆಂಬದು ಇವುಗಳನ್ನು ಪದೇಪದೇ ಅಸ್ತಿವಾರವಾಗಿ ಹಾಕದೆ ಕ್ರಿಸ್ತನ ವಿಷಯವಾದ ಪ್ರಥಮ ಬೋಧನೆಯನ್ನು ಕುರಿತು ಇನ್ನೂ ಮಾತಾಡದೆ ಪೂರ್ಣವಾದ ತಿಳುವಳಿಕೆಗೆ ಸಾಗುತ್ತಾ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯಾ ವೆಳಾರ್ ಬಾಲ್ತಿಮಾಚ್ಯಾ ವಿಶಯಾತ್, ಹಾತ್ ಥವ್ತಲ್ಯಾ ವಿಶಯಾತ್, ಅನಿ ಮರಲ್ಲೊ ಅನಿಪರ್‍ತುನ್ ಝಿತ್ತೊ ಹೊತಲೆ, ಕನ್ನಾಬಿ ಚುಕಿನಸಲ್ಲಿ ಝಡ್ತಿ ಹ್ಯಾ ಶಿಕಾಪಾಚ್ಯಾ ವಿಶಯಾತ್ನಿ, ಪರ್ತುನ್ ಪಾಯ್ ಘಾಲುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:2
57 ತಿಳಿವುಗಳ ಹೋಲಿಕೆ  

ಅಪೊಸ್ತಲರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ನೇವಿುಸಿದರು.


ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು.


ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.


ಅವರನ್ನು ಕರಕೊಂಡುಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನು ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನಮಾಡಿಸಿಕೊಂಡನು.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ನೀರಿನ ದೀಕ್ಷಾಸ್ನಾನವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ನನಗೂ ಆತನ ಗುರುತಿರಲಿಲ್ಲ; ಆದರೆ ನೀರಿನ ಸ್ನಾನವನ್ನು ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನು - ಯಾವನ ಮೇಲೆ ಆತ್ಮವು ಇಳಿದುಬಂದು ಇರುವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮದ ಸ್ನಾನವನ್ನು ಕೊಡುವವನು ಎಂದು ತಾನೇ ನನಗೆ ಹೇಳಿದನು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ಆದರೆ ಈಗಿರುವ ಭೂಮ್ಯಾಕಾಶಗಳು ಅದೇ ವಾಕ್ಯದ ಬಲದಿಂದ ಬೆಂಕಿಯ ಮೂಲಕ ನಾಶವಾಗುವದಕ್ಕೆ ಇಡಲ್ಪಟ್ಟಿವೆ; ಮತ್ತು ಭಕ್ತಿಹೀನರ ಶಿಕ್ಷಾವಿಧಿಯೂ ನಾಶವೂ ಉಂಟಾಗುವ ದಿನಕ್ಕಾಗಿ ಆ ಬೆಂಕಿ ಸಿದ್ಧವಾಗಿದೆ.


ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಪುನರುತ್ಥಾನದಿಂದ ತಿರಿಗಿ ಹೊಂದಿದರು. ಕೆಲವರು ತಾವು ಯಾತನೆಯ ಯಂತ್ರಕ್ಕೆ ಕಟ್ಟಲ್ಪಟ್ಟಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿ ಮುರಿಸಿಕೊಂಡು ಸತ್ತರು.


ಅನ್ನಪಾನಾದಿಗಳೂ ವಿವಿಧ ಸ್ನಾನಗಳೂ ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾದವು ಎಂಬದು.


ಅವರು ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಸತ್ಯಭ್ರಷ್ಟರಾಗಿ ಕೆಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.


ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟದ್ದರಿಂದಲೇ ಆ ಸುನ್ನತಿಯನ್ನು ಹೊಂದಿದಿರಿ. ಇದಲ್ಲದೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಸಾಮರ್ಥ್ಯದಲ್ಲಿ ನಂಬಿಕೆಯಿಡುವದರ ಮೂಲಕ ಅದರಲ್ಲಿ ಆತನ ಕೂಡ ಎದ್ದು ಬಂದಿರಿ.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ಯೆಹೂದ್ಯರಾಗಲಿ ಗ್ರೀಕರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗುವದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು; ಒಂದೇ ಆತ್ಮ ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿತು.


ಅವರೆಲ್ಲರೂ ಸಮುದ್ರವನ್ನು ದಾಟಿಹೋದರು; ಅವರೆಲ್ಲರೂ ಮೋಶೆಯ ಶಿಷ್ಯರಾಗುವದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನವು ಬರುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದುಬರುವದು.


ದೇವರು ಸತ್ತವರನ್ನು ಎಬ್ಬಿಸಿದ್ದು ನಂಬತಕ್ಕದ್ದಲ್ಲವೆಂದು ನೀವು ಯಾಕೆ ತೀರ್ಮಾನಿಸುತ್ತೀರಿ?


ನಾನು ಇವರ ನಡುವೆ ನಿಂತು - ಪುನರುತ್ಥಾನದ ವಿಷಯದಲ್ಲಿ ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ ಎಂದು ಕೂಗಿದ್ದನ್ನೇ ಹೊರತು ಬೇರೆ ಏನೂ ಹೇಳಲಾರರು ಅಂದನು.


ಇದಲ್ಲದೆ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುವದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ;


ಸತ್ತವರು ಜೀವಿತರಾಗಿ ಏಳುವರು ಎಂಬದನ್ನು ಯೇಸುವಿನ ದೃಷ್ಟಾಂತದಿಂದ ಸಾರುತ್ತಾ ಇದ್ದದ್ದಕ್ಕೆ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅಸಮಾಧಾನಪಟ್ಟು ಅಪೊಸ್ತಲರು ಜನರ ಸಂಗಡ ಮಾತಾಡುತ್ತಿರುವಾಗಲೇ ಬಂದು


ಎದ್ದು ಹೊರಗೆ ಬರುವ ಕಾಲ ಬರುತ್ತದೆ. ಒಳ್ಳೇದನ್ನು ಮಾಡಿದವರಿಗೆ ಜೀವಕ್ಕಾಗಿ ಪುನರುತ್ಥಾನವಾಗುವದು; ಕೆಟ್ಟದ್ದನ್ನು ನಡಿಸಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವದು.


ಅವರು ನಿನಗೆ ಮುಯ್ಯಿಗೆಮುಯ್ಯಿಮಾಡುವದಕ್ಕೆ ಏನೂ ಇಲ್ಲದವರಾಗಿದ್ದರೂ ನೀತಿವಂತರು ಜೀವಿತರಾಗಿ ಎದ್ದು ಬರುವಲ್ಲಿ ನಿನಗೆ ಮುಯ್ಯಿಗೆಮುಯ್ಯಾಗುವದರಿಂದ ನೀನು ಧನ್ಯನಾಗುವಿ ಅಂದನು.


ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು. ಅದು ನೆರವೇರುವ ತನಕ ನಾನು ಎಷ್ಟೋ ಬಿಕ್ಕಟ್ಟಿನಲ್ಲಿದ್ದೇನೆ.


ಆತನು ತೊಳಕೊಳ್ಳದೆ ಊಟಕ್ಕೆ ಕೂತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.


ಯೋಹಾನನು ಅವರೆಲ್ಲರಿಗೆ - ನಾನಂತೂ ನಿಮಗೆ ನೀರಿನ ಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮದಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ಕಲ್ಪಿಸಿದ ಸಂಪ್ರದಾಯವನ್ನು ಹಿಡಿದಿದ್ದೀರಿ ಎಂದು ಹೇಳಿದನು.


ಆಗ ಯೋಹಾನನು - ನಾನು ನಿನ್ನಿಂದ ಸ್ನಾನ ಮಾಡಿಸಿಕೊಳ್ಳತಕ್ಕವನಾಗಿರುವಲ್ಲಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿ ಆತನನ್ನು ತಡೆಯುತ್ತಾ ಇದ್ದನು.


ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ ಆ ಇಬ್ಬರ ಮೇಲೆ ಹಸ್ತಾರ್ಪಣ ಮಾಡಿ ಅವರನ್ನು ಕಳುಹಿಸಿಕೊಟ್ಟರು.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು