Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:6 - ಕನ್ನಡ ಸತ್ಯವೇದವು J.V. (BSI)

6 ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಎಲ್ಲರ ಮುಂದೆ ಅವಮಾನಪಡಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರವೂ ವಿಶ್ವಾಸಭ್ರಷ್ಟನಾದರೆ, ಅಂಥವನು ಪಶ್ಚಾತ್ತಾಪಪಟ್ಟು ದೈವಾಭಿಮುಖನಾಗುವುದು ಅಸಾಧ್ಯ. ಏಕೆಂದರೆ, ಅಂಥವನು ತನ್ನ ಪಾಲಿಗೆ ದೇವರ ಪುತ್ರನನ್ನು ಪುನಃ ಶಿಲುಬೆಗೆ ಏರಿಸಿ ಅವರನ್ನು ಬಹಿರಂಗವಾಗಿ ಅವಮಾನಗೊಳಿಸುವವನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಿದ್ದುಹೋದರೆ, ಅವರನ್ನು ತಿರುಗಿ ಪಶ್ಚಾತ್ತಾಪಕ್ಕೆ ನಡೆಸುವುದು ಅಸಾಧ್ಯ. ಏಕೆಂದರೆ ಅವರು ತಾವಾಗಿಯೇ ದೇವರ ಪುತ್ರ ಆಗಿರುವವರನ್ನು ಪುನಃ ಶಿಲುಬೆಗೆ ಹಾಕುವವರೂ ಅವರನ್ನು ಬಹಿರಂಗವಾಗಿ ಅವಮಾನ ಪಡಿಸುವವರೂ ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ತೆನಿ ಅಪ್ಲ್ಯಾ ವಿಶ್ವಾಸಾತ್ ಪಡುನ್ ಗೆಲ್ಯಾರ್ ತೆಂಕಾ ದೆವಾಕ್ಡೆ ಮನ್ ಪರ್ತುನ್ ಹಾನ್ತಲೆ ಹೊಯ್ನಸಲ್ಲೆ ಕಾಮ್, ಕಶ್ಯಾಕ್ ಮಟ್ಲ್ಯಾರ್, ತೆನಿ ಅನಿ ಪರ್ತುನ್ ದೆವಾಚ್ಯಾ ಲೆಕಾಕ್ ಕುರ್ಸಾರ್ ಮಾರ್‍ತಲೆ ಬಿ ಅನಿ ಬಹಿರಂಗಾತ್ ಹಾನುನ್ ಅವ್ಮಾನ್ ಕರ್‍ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:6
17 ತಿಳಿವುಗಳ ಹೋಲಿಕೆ  

ಅವರು ನೀತಿ ಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದಿದ್ದರೆ ಮೇಲಾಗಿತ್ತು.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ಒಂದು ಸಾರಿ ಜ್ಞಾನಪ್ರಕಾಶದಲ್ಲಿ ಸೇರಿ ಪರಲೋಕದಿಂದಾದ ದಾನದ ಅನುಭವವನ್ನು ಹೊಂದಿ


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ಎದುರಿಸುವವರನ್ನು ನಿಧಾನದಿಂದ ತಿದ್ದುವವನೂ ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಅಂದನು.


ಹೀಗಿರುವದರಿಂದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವದಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನೇ ಕಟ್ಟುತ್ತೀರಿ.


ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.


ಯಾಕಂದರೆ ಸತ್ಯದ ಪರಿಜ್ಞಾನವನ್ನು ನಾವು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಇರುವದಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು