Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:9 - ಕನ್ನಡ ಸತ್ಯವೇದವು J.V. (BSI)

9 ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇರುವ ಸ್ಥಿತಿಯಲ್ಲಿದ್ದೀರೆಂದು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಿಯರೇ, ನಾವು ಈ ರೀತಿ ಹೇಳಿದೆವಾದರೂ ನಿಮ್ಮ ಪರಿಸ್ಥಿತಿ ಉತ್ತಮವಾಗಿದೆ ಮತ್ತು ನೀವು ಜೀವೋದ್ಧಾರದ ಮಾರ್ಗದಲ್ಲಿ ಇದ್ದೀರಿ ಎಂಬ ದೃಢವಾದ ನಂಬಿಕೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪ್ರಿಯ ಸ್ನೇಹಿತರೇ, ನಾವು ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದರೂ ನಿಮ್ಮಿಂದ ಇದಕ್ಕಿಂತಲೂ ಉತ್ತಮವಾದ ಕಾರ್ಯಗಳನ್ನು ಅಪೇಕ್ಷಿಸುತ್ತೇವೆ. ರಕ್ಷಣೆಗೆ ಸಂಬಂಧಿಸಿದ ಕಾರ್ಯಗಳನ್ನು ನೀವು ಮಾಡುತ್ತೀರೆಂದು ನಾವು ದೃಢವಾಗಿ ನಂಬಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪ್ರಿಯರೇ, ನಾವು ಈ ರೀತಿಯಾಗಿ ಮಾತನಾಡಿದರೂ ನಿಮ್ಮ ವಿಷಯವಾಗಿಯೂ ನೀವು ಉತ್ತಮವಾದವುಗಳನ್ನೂ ರಕ್ಷಣೆಯ ಕಾರ್ಯಗಳನ್ನೂ ಹೊಂದಿದ್ದೀರಿ ಎಂಬ ನಿಶ್ಚಯ ನಮಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಪ್ರೆಮಾಚ್ಯಾ ಬಾವಾನು, ಅಮಿ ಅಶೆ ಬೊಲ್ಯಾರ್‍ಬಿ ತುಮಿ ಹೆಚ್ಯಾನ್ಕಿಂತಾಬಿ ಬರೆ ಅನಿ ಸುಟ್ಕೆಚ್ಯಾ ವಾಟೆಕುಚ್ ಹಾಸಿ ಮನ್ತಲೆ ಮಾಕಾ ವಿಶ್ವಾಸ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:9
24 ತಿಳಿವುಗಳ ಹೋಲಿಕೆ  

ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ದೇವರ ಚಿತ್ತಾನುಸಾರವಾಗಿರುವ ದುಃಖವು ಮಾನಸಾಂತರವನ್ನುಂಟುಮಾಡಿ ರಕ್ಷಣೆಗೆ ಕಾರಣವಾಗಿದೆ; ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ಬೇಡಿಗಳನ್ನು ಹಾಕಿಸಿಕೊಂಡವರ ಕಷ್ಟವನ್ನು ನೋಡಿ ಅವರ ಸಂಗಡ ನೀವು ದುಃಖ ಪಟ್ಟದ್ದಲ್ಲದೆ ನಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟಿರಿ.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ಆದದರಿಂದ ಪ್ರಿಯ ಸಹೋದರರೇ, ವಿಗ್ರಹಾರಾಧನೆಯ ಗೊಡವೆಯನ್ನು ಸಂಪೂರ್ಣವಾಗಿ ತೊರೆದುಬಿಡಿರಿ.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುವವರೆಂದು ನೆನಸುತ್ತೀರೋ? ನಿಮ್ಮ ಮುಂದೆಯಲ್ಲ, ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತಾಡುವವರಾಗಿದ್ದೇವೆ. ಪ್ರಿಯರೇ, ನಾವು ಮಾತಾಡುವದೆಲ್ಲಾ ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಆಗಿದೆ.


ಪ್ರಿಯರೇ, ಪ್ರವಾಸಿಗಳೂ ಪರದೇಶಸ್ಥರೂ ಆಗಿರುವ ನೀವು ನಿಮ್ಮ ಆತ್ಮದ ಮೇಲೆ ಯುದ್ಧಮಾಡುವ ಶಾರೀರಿಕ ಅಭಿಲಾಷೆಗಳಿಗೆ ದೂರವಾಗಿರಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ.


ಪ್ರಿಯರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ. ಮೊದಲಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ನೀವು ಕೇಳಿದ ವಾಕ್ಯವೇ.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು