Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:11 - ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಲೇವಿಯರ ಯಾಜಕತ್ವದ ಆಧಾರದ ಮೇಲೆ ಜನರು ನಿಯಮವನ್ನು ಪಡೆದಿದ್ದರು. ಈ ಯಾಜಕತ್ವದ ಮೂಲಕವೇ ಪರಿಪೂರ್ಣತೆಯು ಉಂಟಾಗಿದ್ದರೆ, ಆರೋನನ ಕ್ರಮಾನುಸಾರವಾಗಿರದೆ ಮೆಲ್ಕಿಜೆದೇಕನ ಕ್ರಮದ ಪ್ರಕಾರ ಬೇರೊಬ್ಬ ಯಾಜಕನು ಎದ್ದೇಳುವ ಅವಶ್ಯವೇನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಲೆವಿಚ್ಯಾ ಘರಾನ್ಯಾಚ್ಯಾ ಯಾಜಕ್ ಕಾಮಾಚ್ಯಾ ವೈನಾ ಲೊಕಾಕ್ನಿ ದಿವ್ನ್ ಹೊತಾ, ಹೊಲ್ಯಾರ್ಬಿ ಯಾಜಕ್ ಕಾಮಾಕ್ನಾ ಲೊಕಾಕ್ನಿ ಆತ್ಮ್ಯಾನ್ ಸಂಪುರ್ನ್ ಕರುಕ್ ಹೊವ್ಕ್ ನಾ, ತಸೆ ಹೊವ್ನ್ ದುಸ್ರ್ಯಾ ನಮನಿಚೊ ಯಾಜಕ್ ಯೆತಲೊ ತೆಂಕಾ ಪಾಜೆಚ್ ಹೊವ್ನ್ ಹೊತ್ತೊ, ತಸೆ ಮಟ್ಲ್ಯಾರ್ ಮೆಲ್ಕಿಜೆದೆಕ್ ಸಾರ್ಕೊ ಯಾಜಕುಚ್ ಪಾಜೆ ಹೊಲ್ಲೊ, ಅನಿ ಆರೊನಾ ಸಾರ್ಕೊಸೊ ನ್ಹಯ್ ಮನ್ತಲೆ ಹೆಚೊ ಅರ್ಥ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:11
17 ತಿಳಿವುಗಳ ಹೋಲಿಕೆ  

ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ ಎರಡನೆಯ ಒಡಂಬಡಿಕೆಗೆ ಅವಕಾಶವು ಇರುತ್ತಿರಲಿಲ್ಲ.


ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ಕರ್ಮಮಾರ್ಗದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದಕ್ಕೆ ಕಾರಣವೇ ಇಲ್ಲ.


ಇದಲ್ಲದೆ ಬೇರೊಬ್ಬ ಯಾಜಕನು ಶರೀರಧರ್ಮ ವಿಷಯವಾದ ನಿಯಮದ ಪ್ರಕಾರವಾಗಿರದೆ ಮೆಲ್ಕಿಜೆದೇಕನ ಸಾದೃಶ್ಯದಲ್ಲಿ ನಿರ್ಲಯವಾದ ಜೀವದ ಶಕ್ತಿಯುಳ್ಳವನಾಗಿದ್ದು ಬರಬೇಕಾದದರಿಂದ ನಮ್ಮ ಸಿದ್ಧಾಂತ ಮತ್ತೂ ಸ್ವಷ್ಟವಾಯಿತು.


ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ - ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.


ಈಗಲಾದರೋ ನೀವು ದೇವರನ್ನು ತಿಳುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ. ಹೀಗಿರಲಾಗಿ ನೀವು ಕೆಲಸಕ್ಕೆ ಬಾರದ ದರಿದ್ರಬಾಲಬೋಧೆಗೆ ಮತ್ತೂ ಅಧೀನರಾಗಬೇಕೆಂದು ಅಪೇಕ್ಷಿಸಿ ಪುನಃ ಅದಕ್ಕೆ ತಿರುಗಿಕೊಳ್ಳುವದು ಹೇಗೆ?


ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ನಮಗೋಸ್ಕರ ಮುಂದಾಗಿ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದವರ ಬಾಲಬೋಧೆಗೆ ಅಧೀನರಾಗಿದ್ದೆವು.


ಹೇಗಂದರೆ ಮೆಲ್ಕಿಜೆದೇಕನು ಲೇವಿಯ ಮೂಲಪುರುಷನನ್ನು ಎದುರುಗೊಂಡಾಗ ಲೇವಿಯು ತತ್ವರೂಪವಾಗಿ ಇವನೊಳಗೆ ಇದ್ದನು.


ಯಾಜಕತ್ವವು ಬೇರೆಯಾದರೆ ಧರ್ಮಶಾಸ್ತ್ರವು ಕೂಡ ಬೇರೆಯಾಗುವದು ಅಗತ್ಯ.


ಮೇಲ್ಕಂಡ ಮಾತು ಯಾವಾತನ ವಿಷಯದಲ್ಲಿ ಹೇಳಿದೆಯೋ ಆತನು ಬೇರೊಂದು ಕುಲದಲ್ಲಿ ಹುಟ್ಟಿದವನು; ಆ ಕುಲದವರಲ್ಲಿ ಒಬ್ಬರೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.


ಇವುಗಳು ಹೀಗೆ ಸಿದ್ಧಮಾಡಲ್ಪಟ್ಟ ಮೇಲೆ ಯಾಜಕರು ಯಾವಾಗಲೂ ಗುಡಾರದ ಮುಂದಣ ಭಾಗದೊಳಗೆ ಹೋಗಿ ದೇವಾರಾಧನೆಯನ್ನು ನಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು