Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:13 - ಕನ್ನಡ ಸತ್ಯವೇದವು J.V. (BSI)

13 ಮೇಲ್ಕಂಡ ಮಾತು ಯಾವಾತನ ವಿಷಯದಲ್ಲಿ ಹೇಳಿದೆಯೋ ಆತನು ಬೇರೊಂದು ಕುಲದಲ್ಲಿ ಹುಟ್ಟಿದವನು; ಆ ಕುಲದವರಲ್ಲಿ ಒಬ್ಬರೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದನ್ನೆಲ್ಲಾ ಯಾರನ್ನು ಕುರಿತು ಹೇಳಲಾಗಿದೆಯೋ ಆ ವ್ಯಕ್ತಿ ಹುಟ್ಟಿದ್ದು ಬೇರೊಂದು ಕುಲದಲ್ಲಿ. ಆ ಕುಲದಲ್ಲಿ ಎಂದೂ ಯಾರೂ ಬಲಿಪೀಠದ ಸೇವೆ ಮಾಡಿದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಕ್ರಿಸ್ತನನ್ನು ಕುರಿತು ಇವುಗಳನ್ನು ಹೇಳುತ್ತಿರುವೆವು. ಆತನು ಬೇರೊಂದು ಕುಲಕ್ಕೆ ಸೇರಿದವನು. ಆ ಕುಲದವರಲ್ಲಿ ಯಾರೇ ಆಗಲಿ ಎಂದೂ ಯಾಜಕರಾಗಿ ಸೇವೆ ಮಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇವು ಯಾರ ವಿಷಯದಲ್ಲಿ ಹೇಳಿದೆಯೋ ಆ ವ್ಯಕ್ತಿ ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಎಂದೂ ಯಾರೂ ಬಲಿಪೀಠದ ಬಳಿ ಸೇವೆ ಮಾಡಿದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮಿ ಕ್ರಿಸ್ತಾಚ್ಯಾ ವಿಶಯಾತ್ ಹೆ ಸಾಂಗುಕ್ ಲಾಗ್ಲಾಂವ್ ತೊ ದುಸ್ರ್ಯಾಚ್ ಘರಾನಾಕ್ನಾ ಯೆಲ್ಲೊ ಹಾಯ್, ತ್ಯಾ ಘರಾನಾತ್ ಕೊನುಚ್ ಹೊಲ್ಯಾರ್ಬಿ ಕನ್ನಾಬಿ ಯಾಜಕ್ ಹೊವ್ನ್ ಸೆವಾ ಕರಲ್ಲೆ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:13
6 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?


ನಮ್ಮ ಕರ್ತನು ಯೆಹೂದ ಕುಲದಲ್ಲಿ ಜನಿಸಿದವನೆಂಬದು ಪ್ರಸಿದ್ಧವಾಗಿದೆಯಷ್ಟೆ; ಈ ಕುಲದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಒಂದು ಮಾತನ್ನಾದರೂ ಹೇಳಲಿಲ್ಲ.


ನಾನು ಯಾರನ್ನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲ್ಯರು ನಿವ್ಮಿುಬ್ಬರಿಗೆ ವಿರೋಧವಾಗಿ ಮಾಡುವ ಗುಣುಗುಟ್ಟುವಿಕೆಯು ನನಗೆ ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ ಅಂದನು.


ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ಯಾಜಕತ್ವವು ಬೇರೆಯಾದರೆ ಧರ್ಮಶಾಸ್ತ್ರವು ಕೂಡ ಬೇರೆಯಾಗುವದು ಅಗತ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು