Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:19 - ಕನ್ನಡ ಸತ್ಯವೇದವು J.V. (BSI)

19 ಧರ್ಮಶಾಸ್ತ್ರವು ಯಾವದನ್ನೂ ಸಿದ್ಧಿಗೆ ತಾರದೆ ಇರುವದರಿಂದ ಮೊದಲಿದ್ದ ನಿಯಮವು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ರದ್ದಾಗಿಹೋಯಿತು. ಅದಕ್ಕೆ ಬದಲಾಗಿ ಉತ್ತಮವಾಗಿರುವ ಒಂದು ನಿರೀಕ್ಷಾಧಾರವು ಪ್ರಾಬಲ್ಯಕ್ಕೆ ಬಂತು. ಈ ನಿರೀಕ್ಷಾಧಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೋಶೆಯ ಧರ್ಮಶಾಸ್ತ್ರವು ಯಾವುದನ್ನೂ ಸಿದ್ಧಿಗೆ ತರಲಿಲ್ಲ. ಈಗ ನಮಗೆ ಉತ್ತಮವಾದ ಒಂದು ನಿರೀಕ್ಷೆಯನ್ನು ಕೊಡಲಾಗಿದೆ. ಈ ನಿರೀಕ್ಷೆಯು ನಮ್ಮನ್ನು ದೇವರ ಬಳಿಗೆ ಕೊಂಡೊಯ್ಯಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮೊಯ್ಜೆಚ್ಯಾ ಖಾಯ್ದ್ಯಾನ್ ಖಲೆಬಿ ಸಂಪುರ್ನತೆಕ್ ಹಾನುಕ್ ನಾ ಅತ್ತಾ ಅಮ್ಕಾ ಬರಿ ಖಬರ್ ಅನಿ ಬರೊಸೊ ದೆವಾಚ್ಯಾ ಜಗೊಳ್ ನ್ಹೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:19
29 ತಿಳಿವುಗಳ ಹೋಲಿಕೆ  

ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಹೊಂದಲಾಗದ ಎಲ್ಲಾ ಪಾಪಗಳಿಂದ ನಂಬುವವರೆಲ್ಲರು ಆತನ ಮೂಲಕವಾಗಿ ಬಿಡುಗಡೆ ಹೊಂದಿ ನೀತಿವಂತರೆನಿಸಿಕೊಳ್ಳುತ್ತಾರೆ.


ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ.


ಆ ಗುಡಾರವು ಈಗಿನ ಕಾಲದವರಿಗೋಸ್ಕರ ಒಂದು ಒಳಗಣ ಅರ್ಥವನ್ನು ಸೂಚಿಸುತ್ತದೆ; ಏನಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಯಜ್ಞಗಳೂ ದೇವಾರಾಧನೆ ಮಾಡುವವರನ್ನು ಮನಸ್ಸಾಕ್ಷಿಯು ಒಪ್ಪುವಂತೆ ಸಿದ್ಧಿಗೆ ತರಲಾರದೆ


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ಸಂಕಲ್ಪಿಸಿದನು.


ಧರ್ಮಶಾಸ್ತ್ರದಲ್ಲಿ ಮುಂದೆ ಬರಬೇಕಾಗಿದ್ದ ಮೇಲುಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲವಾದದರಿಂದ ಆ ಧರ್ಮಶಾಸ್ತ್ರವು ವರುಷ ವರುಷಕ್ಕೆ ಪದೇ ಪದೇ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.


ಆದರೆ ಯೇಸು ಅದಕ್ಕಿಂತ ಶ್ರೇಷ್ಠವಾದ ಯಾಜಕೋದ್ಯೋಗವನ್ನು ಹೊಂದಿದವನಾಗಿದ್ದಾನೆ; ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.


ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?


ನಮ್ಮ ರಕ್ಷಕನಾದ ದೇವರಿಂದಲೂ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನಿಂದಲೂ ನೇವಿುಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ದೇವರ ಸಾನ್ನಿಧ್ಯ ಸೇರುವದಕ್ಕೆ ನಮಗಿರುವ ಭರವಸವುಳ್ಳ ಧೈರ್ಯವು ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗೆ ಉಂಟಾಯಿತು.


ಹೀಗಿರಲಾಗಿ ಧರ್ಮಶಾಸ್ತ್ರವು ನಮ್ಮನ್ನು ಕಾಯುವ ಆಳಿನಂತಾಗಿದೆ; ನಾವು ನಂಬಿಕೆಯಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದುವದಕ್ಕಾಗಿ ಕ್ರಿಸ್ತನಲ್ಲಿಗೆ ಸೇರುವ ತನಕ ಅದು ನಮ್ಮನ್ನು ಕಾಯುತ್ತದೆ.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು ಭಯಪಡಬೇಡ ಎಂದು ಹೇಳಿದಿ.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ, ಆಶಿಸಬಾರದೆಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯುತ್ತಿದ್ದಿಲ್ಲ.


ಹಾಗಾದರೆ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳುಕೊಳ್ಳಬಾರದು. ಬದುಕಿಸುವದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಸಂದೇಹವಿಲ್ಲದೆ ಕರ್ಮಮಾರ್ಗದಿಂದಲೇ ನೀತಿಯುಂಟಾಗುತ್ತಿತ್ತು.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಇದಲ್ಲದೆ ಲೇವಿಯರು ಆಣೆಯಿಲ್ಲದೆ ಯಾಜಕರಾದರು; ಆತನಾದರೋ ಆಣೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ದೇವರು ಆತನಿಗೆ - ನೀನು ಸದಾಕಾಲವೂ ಯಾಜಕನಾಗಿದ್ದೀ ಎಂದು ಕರ್ತನೆಂಬ ನಾನು ಆಣೆಯಿಟ್ಟು ನುಡಿದೆನು; ಪಶ್ಚಾತ್ತಾಪಪಡುವದಿಲ್ಲ ಎಂಬದಾಗಿ ಹೇಳಿದನಲ್ಲಾ.


ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ದೇವರ ಬಳಿಗೆ ಬರುವವನು ದೇವರು ಇದ್ದಾನೆ, ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬುವದು ಅವಶ್ಯ.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು