ಇಬ್ರಿಯರಿಗೆ 8:10 - ಕನ್ನಡ ಸತ್ಯವೇದವು J.V. (BSI)10 ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಮಿಯಾ ಇಸ್ರಾಯೆಲ್ ಲೊಕಾಂಚ್ಯಾ ವಾಂಗ್ಡಾ ಯೆತಲ್ಯಾ ದಿಸಾತ್ನಿ ಕರುನ್ ಘೆತಲೆ ಕರಾಕ್ ಅಶೆ ಹಾಯ್! ಮಾಜೊ ಹುಕುಮ್ ತೆಂಚ್ಯಾ ಮನಾತ್ ಥವ್ತಾ; ಅನಿ ತೆಂಚ್ಯಾ ಮನಾತ್ನಿ ವೈರ್ ಲಿವ್ತಾ, ಮಿಯಾ ತೆಂಚೊ ದೆವ್ ಹೊವ್ನ್ ರ್‍ಹಾತಾ, ತೆನಿ ಮಾಜಿ ಲೊಕಾ ಹೊವ್ನ್ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿ |