ಇಬ್ರಿಯರಿಗೆ 9:10 - ಕನ್ನಡ ಸತ್ಯವೇದವು J.V. (BSI)10 ಅನ್ನಪಾನಾದಿಗಳೂ ವಿವಿಧ ಸ್ನಾನಗಳೂ ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾದವು ಎಂಬದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತಿ ಯಜ್ನ್ ಕಾನಿಕ್, ಜೆವಾನ್ ಖಾನ್ ಅನಿ ನ್ಹಾತಲ್ಯಾಚ್ಯಾ ಸಾಟ್ನಿ ಹೊತ್ತಿ ಹೆ ಸಗ್ಳೆ ಆಂಗಾಕ್ ಸಮಂದ್ ಪಡಲಿ ನೆಮಾ, ಮನಾಕ್ ಸಮಂದ್ ಪಡಲಿ ನೆಮಾ ನ್ಹಯ್, ದೆವಾಚಿ ನ್ಹವಿ ವಾಟ್ ಗಾವಿ ಪತರ್ ತೆನಿ ಅಸೆಚ್ ದೆವಾಚಿ ನ್ಹವಿ ನೆಮಾ ದಿಲ್ಯಾನ್. ಅಧ್ಯಾಯವನ್ನು ನೋಡಿ |