Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:15 - ಕನ್ನಡ ಸತ್ಯವೇದವು J.V. (BSI)

15 ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದೆವಾನ್ ಬಲ್ವಲ್ಲಿ ಲೊಕಾ ದೆವಾಕ್ನಾ ಗೊಸ್ಟಿಯಾ ಘೆಂವ್ದಿ ಮನುನ್ ಕ್ರಿಸ್ತಾನ್ ನ್ಹವೊ ಕರಾರ್ ಹಾನ್ಲ್ಯಾನ್, ದೆವಾಚಿ ಲೊಕಾ ತೆ ಶಾಸ್ವತ್ ಕರುನ್ ಘೆವ್ಕ್ ಹೊತಾ ಕಶ್ಯಾಕ್ ಮಟ್ಲ್ಯಾರ್, ಪೈಲೆಚ್ಯಾ ಕರಾರಾಚ್ಯಾ ವೆಳಾರ್ ಕರಲ್ಯಾ ಪಾಪಾಂತ್ನಾ ಲೊಕಾಕ್ನಿ ಸುಟ್ಕಾ ಕರುಕ್ ಸಾಟ್ನಿ ಕ್ರಿಸ್ತ್ ಖುರ್ಸಾರ್ ಮರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:15
52 ತಿಳಿವುಗಳ ಹೋಲಿಕೆ  

ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.


ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.


ಏಕಂದರೆ ದೇವರು ಒಬ್ಬನೇ; ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಯೇಸು ಆಣೆಯೊಡನೆಯೇ ಯಾಜಕನಾದದರಿಂದ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,


ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇವಿುತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ದೇವರು ಅಬ್ರಹಾಮನಿಗೆ ವಾಗ್ದಾನಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದರಿಂದ ತನ್ನಾಣೆಯಿಟ್ಟು -


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ,


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಇಲ್ಲಿ ಹೊಸ ಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೇದಾಗಿ ಮಾಡಿದ್ದಾನೆ. ಆದರೆ ಹಳೇದಾಗುತ್ತಾ ಮುದಿಯಾಗುವಂಥದಕ್ಕೆ ಅಂತ್ಯವು ಸಮೀಪವಾಗಿದೆ.


ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ಇವರೆಲ್ಲರು ವಾಗ್ದಾನದ ಫಲಗಳನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ಉಲ್ಲಾಸದೊಡನೆ ವಂದಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂವಿುಯ ಮೇಲೆ ಪರದೇಶದವರೂ ಪ್ರವಾಸಿಗಳೂ ಆಗಿದ್ದೇವೆಂದು ಒಪ್ಪಿಕೊಂಡರು.


ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವು ಪ್ರಸಿದ್ಧವಾಗಿರಬೇಕಷ್ಟೆ.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿದಂತೆ ಅನ್ಯಜನರೊಳಗಿಂದ ಸಹ ಕರೆದನು.


ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.


ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.


ಒಬ್ಬ ಅಧಿಕಾರಿಯು ಬಂದು - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಲಾಗಿ


ಆತನು ಹೊರಟು ದಾರಿಹಿಡಿದು ಹೋಗುವಾಗ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಲಾಗಿ ಯೇಸು ಅವನಿಗೆ -


ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವದಕ್ಕೆ ಕೊಟ್ಟಿರಿ; ರೋಗದಲ್ಲಿ ಬಿದ್ದಿದ್ದೆನು, ನನ್ನನ್ನು ಆರೈಕೆ ಮಾಡುವದಕ್ಕೆ ಬಂದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವದಕ್ಕೆ ಬಂದಿರಿ ಎಂದು ಹೇಳುವನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ಯೆಹೋವನು ಸದ್ಭಕ್ತರ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವಾಸ್ತ್ಯವು ಶಾಶ್ವತವಾಗಿ ನಿಲ್ಲುವದು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಅವನು ಮದುವೆಗೆ ಹೇಳಿಸಿಕೊಂಡವರನ್ನು ಕರೆಯುವದಕ್ಕೆ ತನ್ನ ಆಳುಗಳನ್ನು ಕಳುಹಿಸಲು ಬರುವದಕ್ಕೆ ಅವರಿಗೆ ಮನಸ್ಸಿರಲಿಲ್ಲ.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.


ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.


ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ, ದೇವರಾದರೋ ಒಬ್ಬನೇ.


ಆ ವಾಗ್ದಾನದ ಫಲಕ್ಕೋಸ್ಕರ ಅಬ್ರಹಾಮನು ಬಹು ದಿವಸ ಕಾದುಕೊಂಡಿದ್ದು ಆ ಫಲವನ್ನು ದೇವರು ಹೇಳಿದ ಹಾಗೆಯೇ ಹೊಂದಿದನು.


ಬೇಡಿಗಳನ್ನು ಹಾಕಿಸಿಕೊಂಡವರ ಕಷ್ಟವನ್ನು ನೋಡಿ ಅವರ ಸಂಗಡ ನೀವು ದುಃಖ ಪಟ್ಟದ್ದಲ್ಲದೆ ನಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು