Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:18 - ಕನ್ನಡ ಸತ್ಯವೇದವು J.V. (BSI)

18 ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾದರೂ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದ್ದರಿಂದಲೇ, ಮೊದಲನೆಯ ಒಡಂಬಡಿಕೆ ಕೂಡ ರಕ್ತಧಾರೆ ಇಲ್ಲದೆ ಪ್ರತಿಷ್ಠಾಪನೆಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಮೊದಲನೆ ಒಡಂಬಡಿಕೆ ಇದಕ್ಕೆ ಹೋಲಿಕೆಯಾಗಿದೆ. ಮೊದಲನೆ ಒಡಂಬಡಿಕೆ ಉಪಯುಕ್ತಕ್ಕೆ ಬರಲು ರಕ್ತಾರ್ಪಣೆಯಾಗಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಪ್ರತಿಷ್ಠಾಪನೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದೆವಾನ್ ಅಪ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಕರುನ್ ಘೆಟಲ್ಲೆ ಪೈಲೆಚೆ ಕರಾರ್ ಹೆಕಾ ಸಮಾ ಹಾಯ್, ಪೈಲೆಚೆ ಕರಾರಾ ಉಪೆಗಾಕ್ ಯೆವ್ಕ್ ರಗಾತ್ ಒಪ್ಸುನ್ ಹೊವ್ಚೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:18
8 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಲಿನ ಮೇಲಣ ಪಟ್ಟಿಗೂ ಎರಡು ನಿಲುವುಕಂಬಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದೊಳಗಾಗಿ ಬಾಗಲಿನಿಂದ ಹೊರಗೆ ಹೋಗಕೂಡದು.


ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ ಉಳಿದ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.


ಮರಣಶಾಸನವು ಮರಣವಾದ ಮೇಲೆ ನಡೆಯುವದೇ ಹೊರತು ಬರೆಯಿಸಿದವನು ಜೀವದಿಂದಿರುವಾಗ ಎಂದಿಗೂ ಸಲ್ಲುವದಿಲ್ಲ.


ಮೋಶೆಯು ದೇವರ ವಿಧಿಗಳನ್ನೆಲ್ಲಾ ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೆ, ಹಿಸ್ಸೋಪು ಕಡ್ಡಿ ಇವುಗಳೊಂದಿಗೆ ಹೋರಿಕರಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು