Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:22 - ಕನ್ನಡ ಸತ್ಯವೇದವು J.V. (BSI)

22 ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಎಂದೇ, ಧರ್ಮಶಾಸ್ತ್ರದ ಪ್ರಕಾರ ಹೆಚ್ಚುಕಡಿಮೆ ಎಲ್ಲವೂ ರಕ್ತದಿಂದಲೇ ಶುದ್ಧೀಕರಣ ಹೊಂದುತ್ತವೆ. ರಕ್ತಧಾರೆ ಇಲ್ಲದೆ ಪಾಪಪರಿಹಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಲೈ ಕರುನ್ ಹರ್ ಎಕ್ ರಗ್ತಾನುಚ್ ನಿತಳ್ ಹೊವ್ಚೆ ಮನುನ್ ಪವಿತ್ರ್ ಪುಸ್ತಕ್ ಸಾಂಗ್ತಾ ರಗಾತ್ ನಸ್ತಾನಾ ಪಾಪಾಚಿ ಸುಟ್ಕಾ ಹೊವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:22
14 ತಿಳಿವುಗಳ ಹೋಲಿಕೆ  

ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದಷ್ಟೆ.


ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವದು.


ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯಜ್ಞವೇದಿಯಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ನಿಮಗೆ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವದು.


ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.


ಮತ್ತೊಂದು ಪಕ್ಷಿಯನ್ನೂ ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಸೆಲೇ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನೂ ಸಜೀವವಾಗಿಯೇ ಅದ್ದಿ


ಮತ್ತೊಂದನ್ನು ಯಥಾವಿಧಿಯಾಗಿ ಸರ್ವಾಂಗಹೋಮ ಮಾಡಿಬಿಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.


ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ಅವನು [ಅಭಿಷಿಕ್ತ ಯಾಜಕನ] ದೋಷಪರಿಹಾರಕಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವದು.


ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದ ನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.


ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೇವಾರ್ಪಿತವೆಂದು ಸೂಚಿಸುವದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕಯಜ್ಞ.


ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.


ಆಗ ಆ ಪುರುಷನು ನನಗೆ ಹೀಗೆ ಹೇಳಿದನು - ನರಪುತ್ರನೇ, ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಸರ್ವಾಂಗಹೋಮಕ್ಕೂ ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಕೊಳ್ಳಬೇಕು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು