Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:3 - ಕನ್ನಡ ಸತ್ಯವೇದವು J.V. (BSI)

3 ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಾನವೆನಿಸಿಕೊಳ್ಳುವ ಇನ್ನೊಂದು ಭಾಗವಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರ ಎರಡನೆಯ ಭಾಗಕ್ಕೆ ಗರ್ಭಗುಡಿ ಎಂದು ಹೆಸರು. ಈ ಎರಡು ಭಾಗಗಳ ನಡುವೆ ತೆರೆಯಿತ್ತು. ಗರ್ಭಗುಡಿಯನ್ನು ಈ ತೆರೆ ಮರೆಮಾಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎರಡನೆ ತೆರೆಯ ಹಿಂದೆ “ಮಹಾ ಪವಿತ್ರಸ್ಥಳ”ವೆಂದು ಕರೆಸಿಕೊಳ್ಳುವ ಒಂದು ಕೊಠಡಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎರಡನೆಯ ತೆರೆಯ ಆಚೆ ಅತಿ ಪವಿತ್ರ ಸ್ಥಳ ಎಂದು ಕರೆಯಲಾದ ಗುಡಾರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೊನ್ವ್ಯಾ ಫಡ್ದ್ಯಾಚ್ಯಾ ಫಾಟಿ ಆಗ್ದಿ ಪವಿತ್ರ್ ಜಾಗೊ ಮನ್ವುನ್ ಘೆತಲಿ ಖೊಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:3
15 ತಿಳಿವುಗಳ ಹೋಲಿಕೆ  

ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;


ಅದರ ಮೇಲೆ ಕೃಪಾಸನವನ್ನಿಟ್ಟು ಮಂಜೂಷವನ್ನು ಗುಡಾರದೊಳಕ್ಕೆ ತಂದು ಅದರ ಮುಂದೆ ತೆರೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡಬೇಕು.


ಈ ಏರ್ಪಾಟಿನಿಂದ ಗುಡಾರದಲ್ಲಿ ಮುಂದಣ ಭಾಗವು ಇರುವ ತನಕ ದೇವರ ಸಮಕ್ಷಮಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.


ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.


ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು.


ಮತ್ತು ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶೀಯರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವನು.


ಸೊಲೊಮೋನನು ಪರದೆಯನ್ನು ನೀಲಧೂಮ್ರರಕ್ತವರ್ಣಗಳುಳ್ಳ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳನ್ನು ಕಸೂತಿ ಹಾಕಿಸಿದನು.


ದಂಡು ಹೊರಡುವಾಗ ಆರೋನನೂ ಅವನ ಮಕ್ಕಳೂ ಒಳಗೆ ಬಂದು [ಮಹಾಪವಿತ್ರಸ್ಥಾನವನ್ನು] ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಿಬಿಟ್ಟು


ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಿಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.


ದ್ವಾರದ ಪಕ್ಕದ ಗೋಡೆಗಳ ಅಗಲ ಏಳೇಳು ಮೊಳ, ಗರ್ಭಗೃಹದ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ ಇದ್ದವು; ಆಗ ಅವನು ನನಗೆ - ಇದು ಮಹಾಪರಿಶುದ್ಧಸ್ಥಳವೆಂದು ಹೇಳಿದನು.


ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ, ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು