Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:8 - ಕನ್ನಡ ಸತ್ಯವೇದವು J.V. (BSI)

8 ಈ ಏರ್ಪಾಟಿನಿಂದ ಗುಡಾರದಲ್ಲಿ ಮುಂದಣ ಭಾಗವು ಇರುವ ತನಕ ದೇವರ ಸಮಕ್ಷಮಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ವ್ಯವಸ್ಥೆಯಲ್ಲಿ ಗುಡಾರದ ಮೊದಲನೆಯ ಭಾಗ ಇರುವ ತನಕ ಗರ್ಭಗುಡಿಯನ್ನು ಪ್ರವೇಶಿಸುವ ಮಾರ್ಗ ತೆರೆದಿರುವುದಿಲ್ಲ, ಎಂಬುದನ್ನು ಪವಿತ್ರಾತ್ಮ ಸಾಂಕೇತಿಕವಾಗಿ ತಿಳಿಯಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪವಿತ್ರಾತ್ಮನು ಆ ಎರಡು ಪ್ರತ್ಯೇಕವಾದ ಕೊಠಡಿಗಳ ಮೂಲಕ ನಮಗೆ ತಿಳಿಸುವುದೇನೆಂದರೆ, ಮೊದಲನೆ ಕೊಠಡಿಯು ಅಲ್ಲಿ ಇರುವವರೆಗೂ ಮಹಾ ಪವಿತ್ರಸ್ಥಳಕ್ಕೆ ಹೋಗುವ ಮಾರ್ಗವು ತೆರೆಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪಯ್ಲಿ ಖೊಲಿ ರ್‍ಹಾಯ್ ಸಗ್ಳೆ ದೊನ್ವೆಚ್ಯಾ ಖೊಲಿಕ್ ಜಾತಲಿ ವಾಟ್ ಕಾಡುಕುಚ್ ಹೊವ್ಕ್ ನಾ, ಪವಿತ್ರ್ ಆತ್ಮೊ ಅಮ್ಕಾ ಸಾಂಗ್ತಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:8
15 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಆದದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ


ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಾನವೆನಿಸಿಕೊಳ್ಳುವ ಇನ್ನೊಂದು ಭಾಗವಿತ್ತು;


ದೇವರು ಅನ್ಯಜನರನ್ನು ನಂಬಿಕೆಯ ನಿವಿುತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ - ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು.


ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು.


ಅವರಲ್ಲಿ ಐಕಮತ್ಯವಿಲ್ಲದೆ ಇರುವಾಗ ಪೌಲನು ಅವರಿಗೆ - ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ


ಆದಕಾರಣ ಯೇಸು ಮತ್ತೂ ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಲಾಗಿದ್ದೇನೆ.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವವನಾಗಿ -


ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯ ಪ್ರದೇಶಗಳಲ್ಲಿ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು