Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:9 - ಕನ್ನಡ ಸತ್ಯವೇದವು J.V. (BSI)

9 ಆ ಗುಡಾರವು ಈಗಿನ ಕಾಲದವರಿಗೋಸ್ಕರ ಒಂದು ಒಳಗಣ ಅರ್ಥವನ್ನು ಸೂಚಿಸುತ್ತದೆ; ಏನಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಯಜ್ಞಗಳೂ ದೇವಾರಾಧನೆ ಮಾಡುವವರನ್ನು ಮನಸ್ಸಾಕ್ಷಿಯು ಒಪ್ಪುವಂತೆ ಸಿದ್ಧಿಗೆ ತರಲಾರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವೆಲ್ಲವೂ ಈ ಕಾಲದ ಪರಿಸ್ಥಿತಿಗೆ ಒಂದು ನಿದರ್ಶನವಾಗಿವೆ. ಈ ವ್ಯವಸ್ಥೆಯ ಪ್ರಕಾರ ಸಮರ್ಪಣೆಯಾಗುತ್ತಿದ್ದ ಕಾಣಿಕೆಗಳೂ ಬಲಿಗಳೂ ಆರಾಧಕನ ಅಂತರಂಗವನ್ನು ಪೂರ್ಣವಾಗಿ ಶುದ್ಧಗೊಳಿಸಲು ಅಸಮರ್ಥವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ದಿನ ನಮಗೆ ಇದೊಂದು ಉದಾಹರಣೆಯಾಗಿದೆ. ದೇವರಿಗೆ ಅರ್ಪಿಸಲ್ಪಡುತ್ತಿದ್ದ ಕಾಣಿಕೆಗಳಿಗಾಗಲಿ ಯಜ್ಞಗಳಿಗಾಗಲಿ ದೇವಾರಾಧನೆ ಮಾಡುವ ವ್ಯಕ್ತಿಯನ್ನು ಪರಿಪೂರ್ಣನನ್ನಾಗಿ ಮಾಡಲು ಸಾಧ್ಯವಿರಲಿಲ್ಲ ಎಂಬುದನ್ನು ಇದು ತೋರ್ಪಡಿಸುತ್ತದೆ. ಆ ವ್ಯಕ್ತಿಯ ಹೃದಯವನ್ನು ಪರಿಶುದ್ಧಗೊಳಿಸಲು ಆ ಯಜ್ಞಗಳಿಗೆ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾಕ್ ದಿತಲಿ ಕಾನಿಕ್ ಹೊಂವ್ದಿ ಯಜ್ನ್ ಹೊಂವ್ದಿ ದೆವಾಚೆ ಆರಾದನ್ ಕರ್‍ತಲ್ಯಾ ಮಾನ್ಸಾಕ್ ಪರಿಪುರ್ನ್ ಕರುಕ್ ಹೊಯ್ನಾ ಮನ್ತಲೆ ದಾಕ್ವುತಾ, ತ್ಯಾ ಮಾನ್ಸಾಚೊ ಮನ್ ಚುಕ್ ಕರುಚೆ ಮನುನ್ ಯವಜಲ್ಲ್ಯಾಂಚ್ಯಾನ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:9
16 ತಿಳಿವುಗಳ ಹೋಲಿಕೆ  

ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ಪ್ರತಿಯೊಬ್ಬ ಮಹಾಯಾಜಕನು ಮನುಷ್ಯರೊಳಗಿಂದ ಆರಿಸಲ್ಪಟ್ಟವನಾಗಿದ್ದು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ಜರಗಿಸುವದಕ್ಕಾಗಿ ನೇವಿುಸಲ್ಪಡುತ್ತಾನಲ್ಲಾ. ಅವನು ಅವರಿಗೋಸ್ಕರ ಕಾಣಿಕೆಗಳನ್ನೂ ಪಾಪನಿವಾರಣಕ್ಕಾಗಿ ಯಜ್ಞಗಳನ್ನೂ ಸಮರ್ಪಿಸಬೇಕು.


ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನು ದೇವಾಜ್ಞೆಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚಕಪುರುಷನಾಗಿದ್ದಾನೆ.


ತನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸ ಸಮರ್ಥನಾಗಿದ್ದಾನೆಂದು ತಿಳುಕೊಂಡನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.


ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?


ಹಾಗಾದರೆ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳುಕೊಳ್ಳಬಾರದು. ಬದುಕಿಸುವದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಸಂದೇಹವಿಲ್ಲದೆ ಕರ್ಮಮಾರ್ಗದಿಂದಲೇ ನೀತಿಯುಂಟಾಗುತ್ತಿತ್ತು.


ಈತನು ಇನ್ನೂ ಭೂವಿುಯ ಮೇಲೆ ಇದ್ದದ್ದೇ ಆದರೆ ಯಾಜಕನಾಗಿರುತ್ತಿರಲಿಲ್ಲ; ಯಾಕಂದರೆ ಧರ್ಮನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದೇ ಇರುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು